ಬಿಜೆಪಿ ಅಭ್ಯರ್ಥಿ ಸುಧಾಕರ್ ಪರ ಮತ ಯಾಚಿಸಿದ ನಟಿ ಹರ್ಷಿಕಾ ಪೂಣಚ್ಚ,ನಟ ದಿಗಂತ್

ಚಿಕ್ಕಬಳ್ಳಾಪುರ: ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳೂ ಭಾರೀ ಪ್ರಚಾರದಲ್ಲಿ ತೊಡಗಿವೆ. ಚಿಕ್ಕಬಳ್ಳಾಪುರ ವಿಧಾನಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಸಿಮಾ ಹೀರೋ, ಹೀರೋಯಿನ್‌ಗಳೇ ಪ್ರಚಾರಕ್ಕೆ ನಿಂತಿದ್ದಾರೆ. ನಟಿ , ನಟರಾದ ಹಾಗೂ ಭುವನ್ ಅವರು ಗುರುವಾರ ನಡೆಸಿ ಸುಧಾಕರ್‌ ಪರ ಮತ ಯಾಚಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷಿಕಾ ಪೂಣಚ್ಛ, ಡಾ.ಸುಧಾಕರ್ ಅವರು ತುಂಬಾ ಒಳ್ಳೆಯ ನಾಯಕ. ಅವರು ಈ ಚುನಾವಣೆಯಲ್ಲಿ ಗೆಲ್ಲಬೇಕು. ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸಾಕಷ್ಟು ಶ್ರಮಿಸಿದ್ದಾರೆ. ಎಲ್ಲಾ ಕಡೆ ಉತ್ತಮ ರಸ್ತೆಗಳನ್ನು ನಿರ್ಮಿಸಿದ್ದಾರೆ. ಸುಧಾಕರ್ ರೀತಿಯ ಡೈನಾಮಿಕ್ ನಾಯಕರು ಈ ಚಿಕ್ಕಬಳ್ಳಾಪುರ ಜಿಲ್ಲೆಗೆ ಬೇಕಾಗಿದ್ದಾರೆ. ಜನರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುವ ರಾಜಕಾರಣಿಗಳು ನಮಗೆ ಬೇಕು ಎಂದು ಹೇಳಿದರು. ಚಿಕ್ಕಬಳ್ಳಾಪುರ ನಗರದ 1ನೇ ವಾರ್ಡಿನಲ್ಲಿ ಪ್ರತಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ನಟರು, ಡಾ.ಕೆ.ಸುಧಾಕರ್ ಅವರು ಅಭಿವೃದ್ಧಿಯ ಹರಿಕಾರು. ಅವರು ಈ ಬಾರಿಯೂ ಗೆಲುವು ಸಾಧಿಸಲಿದ್ದು, ಮಂತ್ರಿಯಾಗಬೇಕು ಎಂಬುದು ನಮ್ಮ ಆಸೆ ಎಂದು ಅಭಿಪ್ರಾಯಪಟ್ಟರು.


from India & World News in Kannada | VK Polls https://ift.tt/335Xpcn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...