ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರೈತರಿಂದ ದಿಲ್ಲಿ ಚಲೋ

ಹುಬ್ಬಳ್ಳಿ: , ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪಕ್ಷಾತೀಕ ರೈತ ಹೋರಾಟ ಸಮಿತಿಯು ದೆಹಲಿ ಚಲೋಗೆ ಚಾಲನೆ ನೀಡಿದೆ. ಸಮಿತಿ ಮುಖಂಡ ಸುಭಾಸಚಂದ್ರಗೌಡ ಪಾಟೀಲ ನೇತೃತ್ವದಲ್ಲಿ ನೀಯೋಗವು ದೆಹಲಿ ತೆರಳಲಿದ್ದು, ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಲಿದೆ. ನಗರದ ಹೊರವಲಯದ ಆಕ್ಸ್‌ಫರ್ಡ್ ಕಾಲೇಜಿನಿಂದ ಪಾದಯಾತ್ರೆ ನಡೆಸಿದ ರೈತರು ಕಿತ್ತೂರ ಚೆನ್ನಮ್ಮ ವೃತ್ತದ ಮೂಲಕ ಶಹರದ ರೈಲ್ವೆ ನಿಲ್ದಾಣದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇನ್ನೂ ಗೋವಾ ಸರಕಾರ ಯೋಜನೆ ಅನುಷ್ಠಾನಗೊಳಿಸಲು ಅಡ್ಡುಗಾಲು ಹಾಕುವ ಮೂಲಕ ಪರಿಸರದ ನೆಪವೊಡ್ಡಿ ರಾಜ್ಯದ ಪಾಲಿನ ನೀರನ್ನು ನೀಡಲು ನಿರಾಕರಿಸುತ್ತಿದೆ. ಈಗಾಗಲೇ ಮಹದಾಯಿ ನ್ಯಾಯಾಧೀಕರಣವು ತೀರ್ಪು ನೀಡಿದೆ. ಈ ಮೂಲಕ ರಾಜ್ಯದ ಪಾಲಿನ ನೀರಿನ ಬಳಕೆಗೆ ಸಂಪೂರ್ಣ ಅನುಮತಿ ನೀಡಿದ್ದರೂ ನ್ಯಾಯಾಧಿಕರಣದ ತೀರ್ಪು ನ್ನು ಉಲ್ಲಂಘಿಸುವ ಮೂಲಕ ಈ ಭಾಗದ ಕುಡಿಯುವ ನೀರಿನ ಯೋಜನೆಗೆ ಅಡ್ಡಗಾಲು ಹಾಕುತ್ತಿದೆ. ಕೂಡಲೇ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ದೆಹಲಿ ಚಲೋ ನಡೆಸಲಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವ ಹಾಗೂ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಯೋಜನೆ ಅನುಷ್ಠಾನಗೊಳಿಸಲು ಒತ್ತಾಯಿಸಲಾಗುವುದು ಎಂದು ಹೋರಾಟಗಾರರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಬಸಪ್ಪ ಬೀರಣ್ಣವರ, ಸುಭಾಸ ಚಂದ್ರಗೌಡ, ಹೇಮನಗೌಡ ಬಸನಗೌಡ್ರ ಸೇರಿದಂತೆ ಪಕ್ಷಾತೀತ ರೈತ ಹೋರಾಟ ಸಮಿತಿಯ ನೂರಾರು ಸದಸ್ಯರು ಇದ್ದರು.


from India & World News in Kannada | VK Polls https://ift.tt/2OIsUUV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...