ಹೊಸದಿಲ್ಲಿ: ರಾಷ್ಟ್ರದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಅವರು ಅನರ್ಹ ಶಾಸಕರ ಕುರಿತು ಮಾತನಾಡಿರುವ ಆಡಿಯೊ/ವಿಡಿಯೊವನ್ನು ಸಾಕ್ಷಿಯಾಗಿ ಪರಿಗಣಿಸುವುದಾಗಿ ಹೇಳಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ತೀರ್ಪು ನೀಡುವ ನಿರೀಕ್ಷೆಯಿದೆ. ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಸೋರಿಕೆಯಾಗಿರುವ ಬಿಎಸ್ ಯಡಿಯೂರಪ್ಪ ಅವರ ಆಡಿಯೊವನ್ನು ಸಾಕ್ಷಿಯಾಗಿ ಪರಿಗಣಿಸುವುದಾಗಿ ಹೇಳಿದ್ದು, ಅನರ್ಹ ಶಾಸಕರ ಭವಿಷ್ಯ ಮತ್ತಷ್ಟು ಬಿಗಡಾಯಿಸಿದೆ. ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಿದರು. ಸಿಎಂ ಬಿಎಸ್‌ವೈ ಪರ ಸುಂದರಂ ವಾದಿಸಿದರು. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಬೈಠಕ್‌ನಲ್ಲಿ ನಾಲ್ಕು ಗೋಡೆಯ ಮಧ್ಯೆ ಬಿಎಸ್‌ವೈ ಆಡಿದ ಮಾತುಗಳಿರುವ ಆಡಿಯೊ/ವಿಡಿಯೊ ದೇಶಾದ್ಯಂತ ಸದ್ದು ಮಾಡಿದೆ. ಈ ಆಸ್ತ್ರವನ್ನು ಬಿಜೆಪಿ ವಿರುದ್ಧ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಯೋಗಿಸಿದ್ದು, ಆಡಿಯೊವನ್ನು ಸಾಕ್ಷಿಯಾಗಿ ಪರಿಗಣಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಅನರ್ಹ ಶಾಸಕರು ಮತ್ತು ಬಿಜೆಪಿಗೆ ಹಿನ್ನಡೆಯನ್ನುಂಟು ಮಾಡಿದೆ.
from India & World News in Kannada | VK Polls https://ift.tt/2CiZMgR