ಮುಂದಿನ ವಾರದೊಳಗೆ ಮಹಾ ಮೈತ್ರಿ ಸರಕಾರ ರಚನೆ: ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಮುನ್ಸೂಚನೆ

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಮಹಾ ಮೈತ್ರಿ ಸರಕಾರಕ್ಕೆ ಕಾಂಗ್ರೆಸ್‌ ವರಿಷ್ಠ ನಾಯಕಿ ಹಸಿರು ನಿಶಾನೆ ತೋರಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶಿವಸೇನೆ, ಎನ್‌ಸಿಪಿ ಜತೆಗೂಡಿ ಮೈತ್ರಿ ಸರಕಾರ ರಚಿಸಲು ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ ನೇತೃತ್ವದ ನಿಯೋಗ ಈಗಾಗಲೇ ಗ್ರೀನ್‌ ಸಿಗ್ನಲ್‌ ನೀಡಿದೆ. ಇದರ ಬೆನ್ನಲ್ಲೇ ಗುರುವಾರ ಬೆಳಗ್ಗೆಯಿಂದಲೂ ಕಾಂಗ್ರೆಸ್,‌ ಎನ್‌ಸಿಪಿ, ನಾಯಕರ ಸುದೀರ್ಘ ಸಮಾಲೋಚನೆ ಮುಂದುವರಿದಿದೆ. ಸರಕಾರ ರಚನೆ, ಅಧಿಕಾರ ಮತ್ತು ಖಾತೆ ಹಂಚಿಕೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಮೂರು ಪಕ್ಷದ ನಾಯಕರು ಚರ್ಚೆ ನಡೆಸಿದ್ದಾರೆ. ಮುಂದಿನ ವಾರಾಂತ್ಯದ ವೇಳೆಗೆ ಸರಕಾರ ರಚನೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸೋನಿಯಾ ಗಾಂಧಿ ಜತೆ ಚರ್ಚಿಸಿದ ನಂತರ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ. ಸುಭದ್ರ ಹಾಗೂ ಸ್ಥಿರ ಸರಕಾರ ರಚನೆ ಮಾಡುವ ಮೂಲಕ ಉತ್ತಮ ಆಡಳಿತ ನೀಡಬೇಕು ಎಂದು ಮಹಾರಾಷ್ಟ್ರ ಕಾಂಗ್ರೆಸ್‌ನ ಹಿರಿಯ ನಾಯಕ ಪೃಥ್ವಿರಾಜ್‌ ಚವಾಣ್‌ ತಿಳಿಸಿದ್ದಾರೆ. ಮೂರು ಪಕ್ಷದ ನಾಯಕರು ಶುಕ್ರವಾರ ಜಂಟಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ. ಅಲ್ಲಿ ಮಹಾ ಮೈತ್ರಿ ವಿಚಾರವನ್ನು ಬಹಿರಂಗಪಡಿಸುವ ನಿರೀಕ್ಷೆ ಇದೆ. ಆ ನಂತರ ಮೂರು ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಬೆಂಬಲ ಪತ್ರವನ್ನು ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ನವೆಂಬರ್‌ 22ರಂದು ಶಿವಸೇನೆಯ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಆ ಸಭೆಯಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.


from India & World News in Kannada | VK Polls https://ift.tt/2D0sOT4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...