ಮಾಧುಸ್ವಾಮಿ ಮಾಡಿದ ಡ್ಯಾಮೇಜ್‌ ಕಂಟ್ರೋಲ್‌ಗೆ ಸಿಎಂ ಯತ್ನ, ಕುರುಬರ ಕ್ಷಮೆ ಕೇಳಿದ ಬಿಎಸ್‌ವೈ‌

ಬೆಂಗಳೂರು: ಚಿಕ್ಕನಾಯಕನಹಳ್ಳಿ ಕಾರ್ಯಕ್ರಮದಲ್ಲಿ ನಡೆದ ಘಟನೆಗೆ ನಾನು ಕ್ಷಮೆ ಕೇಳುತ್ತೇನೆ. ಸಚಿವ ಮಾಧುಸ್ವಾಮಿ ಕೂಡ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ನಾನು ಕೂಡ ಕ್ಷಮೆ ಕೇಳುತ್ತೇನೆ. ಈ ವಿಚಾರದಲ್ಲಿ ಗೊಂದಲ ಬೇಡ. ಈ ವಿಚಾರವನ್ನು ಮುಂದುವರೆಸುವುದು ಬೇಡ ಎಂದು ಸಿಎಂ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಸಿದರು. ಸಚಿವ ಅವರು ಕುರುಬ ಸಮಾಜದ ಹೊಸದುರ್ಗ ಶಾಖಾಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಅವಾಚ್ಯ ಶಬ್ಧ ಹಾಗೂ ಏಕವಚನದಿಂದ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ಕುರುಬ ಸಂಘಟನೆಗಳು ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದವು. ಕುರುಬ ಸ್ವಾಮೀಜಿ ಅವರ ವಿರುದ್ಧ ಅವಾಚ್ಯ ಶಬ್ಧ ಬಳಸಿರುವುದಕ್ಕೆ ಖಂಡನೆ ವ್ಯಕ್ತ ಪಡಿಸಿ ಪ್ರತಿಭಟನೆಯೂ ನಡೆದಿತ್ತು. ಸ್ವಾಮೀಜಿಗೆ ಏಕವಚನದ ಮಾತನಾಡಿರುವುದು ಕುರುಬ ಸಮುದಾಯಕ್ಕೆ ಮಾಡಿರುವ ಅಪಮಾನ. ಸಚಿವರು ಕುರುಬ ಸಮುದಾಯದ ಕ್ಷಮೆ ಕೇಳಬೇಕು. ಅವಾಚ್ಯ ಹೇಳಿಕೆ ನೀಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ಸಚಿವರು ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಶಿವಮೊಗ್ಗದಲ್ಲಿ ಶ್ರೀ ಭಕ್ತ ಕನಕದಾಸ ಕುರುಬರ ಸಂಘ ಎಚ್ಚರಿಕೆ ನೀಡಿತ್ತು. ಕುರುಬ ಸಮುದಾಯದ ಆಕ್ರೋಶವನ್ನು ಮನಗಂಡ ಬಿಎಸ್‌ವೈ ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸಿದ್ದಾರೆ. ಶತಾಯಗತಾಯ ಉಪ ಚುನಾವಣೆಯಲ್ಲಿ 12 ಸ್ಥಾನ ಗೆಲ್ಲಲೇ ಬೇಕು ಎಂದು ಶ್ರಮಿಸುತ್ತಿರುವ ಬಿಎಸ್‌ವೈ, ಮಾಧುಸ್ವಾಮಿ ವಿವಾದಾತ್ಮಕ ಹೇಳಿಕೆ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕ್ಷಮೆಯೊಂದಿಗೆ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.


from India & World News in Kannada | VK Polls https://ift.tt/2XvRP1H

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...