
ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿರುವ ಪರಿಣಾಮ ಕೊಯಂಬತ್ತೂರಿನಲ್ಲಿ ಸೋಮವಾರ ಮನೆಯ ಮೇಲೆ ಗೋಡೆ ಕುಸಿದು 17 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಎಂಬಲ್ಲಿ ನಾಲ್ಕು ಮನೆಗಳ ಮೇಲೆ ಆವರಣ ಗೋಡೆ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ. ಕೆಳೆದ ಎರಡು ದಿನಗಳಿಂದ ನಿರಂತಾಗಿ ಸುರಿಯುತ್ತಿರುವ ಮಳೆಗೆ ಈಗಾಗಲೇ 5 ಮಂದಿ ಮೃತಪಟ್ಟಿದ್ದಾರೆ. ಇನ್ನು ಶಂಕರಭರಣಿ ನದಿ ದಡದ ಊರುಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗಿದೆ. ಮುಂಜಾಗೃತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರನ್ನು ನಿಯೋಜನೆ ಮಾಡಲಾಗಿದೆ. ಈ ನಡುವೆ ಮುಂದಿನ 24 ಗಂಟೆಗಳಲ್ಲಿ ಮಳೆ ಮತ್ತಷ್ಟು ಜೋರಾಗಿ ಸುರಿಯಲಿದೆ ಎಂದು ಎಚ್ಚರಿಕೆ ನೀಡಿದೆ. ತಮಿಳುನಾಡಿನ ತಿರುವಲ್ಲೂರು, ತೂತುಕುಡಿ ಹಾಗೂ ರಾಮನಾಥಪುರ ಸೇರಿ ಹಲವು ಕಡೆ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಪಾಂಡಿಚೇರಿಯಲ್ಲೂ ಮಳೆ ಸುರಿಯುವ ಸಾಧ್ಯತೆ ಇದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
from India & World News in Kannada | VK Polls https://ift.tt/35UmnNA