ಸುಡಾನ್‌: ಕಾರ್ಖಾನೆಯಲ್ಲಿ ಸ್ಫೋಟ, 18 ಭಾರತೀಯರ ಸಾವು

ಖಾರ್ತೂಮ್‌ (ಸುಡಾನ್‌): ಸೆರಾಮಿಕ್‌ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 18 ಭಾರತೀಯರು ಸೇರಿ 23 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 130ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಖಾರ್ತೂಮ್‌ ಸಮೀಪದ ಬಾಹ್ರಿಯಲ್ಲಿರುವ ಸೀಲಾ ಸೆರಾಮಿಕ್ಸ್‌ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸೆರಾಮಿಕ್‌ ಕಾರ್ಖಾನೆಯಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಫೋಟದ ನಂತರ 15 ನಾಪತ್ತೆಯಾಗಿದ್ದಾರೆ. ಈ ಸಂಬಂಧ ವಿದೇಶಾಂಗ ವ್ಯವಹಾರ ಸಚಿವ ಎಸ್‌. ಕೂಡ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸುಡಾನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


from India & World News in Kannada | VK Polls https://ift.tt/2qgnI26

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...