ರಾಜ್ಯದಲ್ಲಿ ಕ್ಷತ್ರಿಯ ಅಭಿವೃದ್ಧಿ ನಿಗಮ ಸ್ಥಾಪನೆ ಅಗತ್ಯ: ಡಿವಿ ಸದಾನಂದಗೌಡ

ಬೆಂಗಳೂರು: ರಾಜ್ಯದಲ್ಲಿ ರಾಜು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಿ ನಿಗಮ ಆರಂಭಿಸಲು ಸಹಕರಿಸುವುದಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ರಾಜು ಕ್ಷತ್ರಿಯ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಬುಧವಾರ ಮಾತನಾಡಿದರು. ಹಿಂದುಳಿದ ವರ್ಗಗಳ ವ್ಯಾಪ್ತಿಯಲ್ಲಿ ಬರುವ ರಾಜು ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮದ ಅಗತ್ಯ ಇದೆ. ಇದರಿಂದ ಆ ಸಮಾಜವು ಅಭಿವೃದ್ಧಿಯಾಗಲಿದೆ. ಎಲ್ಲ ಸಮಾಜಗಳು ಅಭಿವೃದ್ಧಿಯಾದಲ್ಲಿ ದೇಶವು ಕೂಡ ಅಭಿವೃದ್ಧಿ ಯಾಗುತ್ತದೆ ಎಂದರು. ಎಲ್ಲ ರಾಜ್ಯಗಳ ಅಭಿವೃದ್ಧಿ ಯಿಂದ ದೇಶ ಹೆಚ್ಚಿನ ಅಭಿವೃದ್ಧಿ ಯಾಗಲಿದೆ. ಇದರಲ್ಲಿ ಬಿಜೆಪಿಗೆ ನಂಬಿಕೆ ಇದೆ. ಹಾಗಾಗಿ ಮುಂದಿನ ಸಂಕ್ರಾಂತಿ ಬಳಿಕ ರಾಜು ಕ್ಷತ್ರಿಯ ಸಮಾಜದ ಮುಖಂಡರ ಜತೆ ಸಿಎಂ ಅವರನ್ನು ಭೇಟಿ ಮಾಡಿ ನಿಗಮ ಸ್ಥಾಪನೆಗೆ ಒತ್ತಡ ಹೇರಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿದರು. ದೇಶದ ಏಳಿಗೆಗೆ ಮಾಜಿ ಪ್ರಧಾನಿ ವಾಜಪೇಯಿ ಅವರ ಕೊಡುಗೆ ಸಾಕಷ್ಟಿದೆ. ಅವರ ಜನ್ಮದಿನದ ಸಂದರ್ಭದಲ್ಲಿ ವಾಜಪೇಯಿ ಅವರ ಸಾಧನೆ ಹಾಗೂ ದೂರದೃಷ್ಟಿ ಯನ್ನು ಗಮನಿಸಿ ಅವರ ಮಾರ್ಗದರ್ಶನ ದಲ್ಲಿ ನಾವೆಲ್ಲಾ ಮುನ್ನಡೆಯಬೇಕಿದೆ ಎಂದು ಸಚಿವ ವಿವರಿಸಿದರು. ಸಂಸದ ಪಿ.ಸಿ.ಮೋಹನ್, ಉಪ ಮೇಯರ್ ಮೋಹನ್ ರಾಜು, ಸಂಘದ ಮುಖ್ಯಸ್ಥ ಎಲ್.ಕೆ.ರಾಜು, ಪದಾಧಿಕಾರಿ ಪುಟ್ಟರಾಜು ಮತ್ತಿತರರಿದ್ದರು.


from India & World News in Kannada | VK Polls https://ift.tt/2QmoSCc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...