ಮಹಾ ಬಿಜೆಪಿ ಮೇಲೆ ಅನಂತಕುಮಾರ್‌ ಹೆಗಡೆ 'ಬುಲೆಟ್‌' ಬಾಂಬ್‌: ದೇವೇಂದ್ರ ಫಡ್ನವಿಸ್‌ ಸ್ಪಷ್ಟನೆ

ಮುಂಬಯಿ: ಕೇಂದ್ರ ಸರಕಾರ ಬುಲೆಟ್ ರೈಲು ಯೋಜನೆಗೆ ಮಂಜೂರು ಮಾಡಿದ್ದ ಹಣವನ್ನು ವಾಪಸ್‌ ಕಳುಹಿಸಲು ಅವರನ್ನು ತ್ವರಿತವಾಗಿ ಮುಖ್ಯಮಂತ್ರಿಯಾಗಿ ಮಾಡಲಾಗಿತ್ತು ಎಂದು ಬಿಜೆಪಿ ಸಂಸದರೇ ಆದ ಅನಂತ್‌ಕುಮಾರ್‌ ಹೆಗಡೆ ಹೇಳಿಕೆ ನೀಡಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌, ಇದೆಲ್ಲ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. 80 ಗಂಟೆಗಳ ಕಾಲ ನಾನು ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ರೀತಿಯ ಹಣಕಾಸು ವ್ಯವಹಾರವನ್ನು ಮಾಡಿಲ್ಲ. ಅಥವಾ ಹಣಕಾಸು ವಿಷಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ನಿರ್ಧಾರವನ್ನೂ ಕೈಗೊಂಡಿಲ್ಲ ಎಂದು ದೇವೇಂದ್ರ ಫಡ್ನವಿಸ್‌ ಸ್ಪಷ್ಟಪಡಿಸಿದ್ದಾರೆ. ಯಾವುದೇ ಹಣಕಾಸು ನೆರವನ್ನು ಕೇಂದ್ರ ಸರಕಾರಕ್ಕೆ ವಾಪಸ್‌ ಕಳುಹಿಸಿಲ್ಲ. ಕೇಂದ್ರ, ರಾಜ್ಯ ಸರಕಾರದ ಹಣಕಾಸು ವರದಿ ಪರಿಶೀಲಿಸಿದರೆ ಮಾಹಿತಿ ದೊರೆಯುತ್ತದೆ ಎಂದು ಹೇಳಿದ್ದಾರೆ. ಯೋಜನೆಗೆ ಕೇಂದ್ರ ಸರಕಾರ ಹಣಕಾಸು ನೆರವು ನೀಡುತ್ತಿದೆ. ರಾಜ್ಯ ಸರಕಾರ ಭೂಮಿಯನ್ನು ಮಾತ್ರ ಮಂಜೂರು ಮಾಡಿದೆ. ಇದನ್ನು ಹೊರತುಪಡಿಸಿದರೆ ಯಾವುದೇ ವ್ಯವಹಾರ ನಡೆದಿಲ್ಲ. ಯಾವುದೇ ನಿರ್ಧಾರ ಕೂಡ ಕೈಗೊಂಡಿಲ್ಲ ಎಂದು ದೇವೇಂದ್ರ ಫಡ್ನವಿಸ್‌ ಸ್ಪಷ್ಟನೆ ನೀಡಿದ್ದಾರೆ.


from India & World News in Kannada | VK Polls https://ift.tt/34F7vm1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...