from India & World News in Kannada | VK Polls https://ift.tt/2WXgtsG
ಕೊಣಾಜೆ: ಡೇರೆಯಲ್ಲೇ ಬೆಳೆದು ಕಷ್ಟ ಪಟ್ಟು ಬಿಎಸ್‌ಸಿ ಪದವಿ ಪಡೆದ ಹೆಣ್ಣು ಮಗಳೊಬ್ಬಳು ಇದೀಗ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಆಯ್ಕೆಯಾಗಿದ್ದಾಳೆ. ಮಂಗಳೂರು ತಾಲೂಕಿನ ಪಾವೂರಿನ ಜನತೆ ತಮ್ಮ ಕಣ್ಣೆದುರಿಗೆ ಕಷ್ಟಪಟ್ಟು ಬೆಳೆದ ಮಮತಾ ಎಂಬ ಹೆಣ್ಣು ಮಗಳೊಬ್ಬಳನ್ನು ಬಿಜೆಪಿ ಬೆಂಬಲಿತ ಸದಸ್ಯೆಯಾಗಿ ಗ್ರಾಮ ಪಂಚಾಯಿತಿಗೆ ಆರಿಸಿ ಕಳುಹಿಸಿದ್ದಾರೆ. ಕಳೆದ ಹಲವು ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಜಯಗಳಿಸಿದ್ದು, ಇದೇ ಮೊದಲ ಬಾರಿ ಬಿಜೆಪಿ ಬೆಂಬಲಿತ ಮಮತಾ ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ. ಉಡುಪಿ ಮೂಲದವರಾದ ಮಮತಾ ತಂದೆ ಕೃಷ್ಣಪ್ಪ, ತಾಯಿ ಪ್ರೇಮ ವಲಸೆ ಕಾರ್ಮಿಕರಾಗಿ ಊರೂರು ಸುತ್ತಿ ಬೀದಿ ಬದಿ ಡೇರೆ ಹಾಕಿ ಜೀವನ ನಡೆಸುತ್ತಿದ್ದರು. 1995ರ ಸಮಯ ಏಕಾಏಕಿ ಕಾಣೆಯಾದ ತಂದೆಯ ನೆನಪಲ್ಲೇ ತಾಯಿ ಪ್ರೇಮ ಹಾಗೂ ಅವರ ಮೂವರು ಮಕ್ಕಳಾದ ಶಿವ, ಭೋಜ ಹಾಗೂ ಮಮತಾ ಅವರು ಪಜೀರು, ಪಾವೂರು, ಇನೋಳಿಯ ರಸ್ತೆ ಬದಿ, ಶೌಚ ಕೊಠಡಿ, ದನದ ಹಟ್ಟಿಯಲ್ಲಿ ವಾಸವಾಗಿದ್ದರು. ಶಿವ ಕ್ಯಾನ್ಸರ್ ಕಾಯಿಲೆ ತುತ್ತಾಗಿ ಅನಾರೋಗ್ಯದಿಂದಿದ್ದು, ಭೋಜ ಹಾಗೂ ಮಮತಾ ಅವರನ್ನು ಸ್ಥಳೀಯ ಶಿಕ್ಷಕ ಮಧು ಮೇಷ್ಟ್ರು ತನ್ನದೇ ಮುತುವರ್ಜಿಯಲ್ಲಿ ಮಲಾರ್ ಪದವು ಶಾಲೆಗೆ ಸೇರಿಸಿದ್ದರು.
ಕೊಣಾಜೆ:
ಡೇರೆಯಲ್ಲೇ ಬೆಳೆದು ಕಷ್ಟ ಪಟ್ಟು ಬಿಎಸ್‌ಸಿ ಪದವಿ ಪಡೆದ ಹೆಣ್ಣು ಮಗಳೊಬ್ಬಳು ಇದೀಗ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಆಯ್ಕೆಯಾಗಿದ್ದಾಳೆ. ಮಂಗಳೂರು ತಾಲೂಕಿನ ಪಾವೂರಿನ ಜನತೆ ತಮ್ಮ ಕಣ್ಣೆದುರಿಗೆ ಕಷ್ಟಪಟ್ಟು ಬೆಳೆದ ಮಮತಾ ಎಂಬ ಹೆಣ್ಣು ಮಗಳೊಬ್ಬಳನ್ನು ಬಿಜೆಪಿ ಬೆಂಬಲಿತ ಸದಸ್ಯೆಯಾಗಿ ಗ್ರಾಮ ಪಂಚಾಯಿತಿಗೆ ಆರಿಸಿ ಕಳುಹಿಸಿದ್ದಾರೆ. ಕಳೆದ ಹಲವು ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಜಯಗಳಿಸಿದ್ದು, ಇದೇ ಮೊದಲ ಬಾರಿ ಬಿಜೆಪಿ ಬೆಂಬಲಿತ ಮಮತಾ ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ. ಉಡುಪಿ ಮೂಲದವರಾದ ಮಮತಾ ತಂದೆ ಕೃಷ್ಣಪ್ಪ, ತಾಯಿ ಪ್ರೇಮ ವಲಸೆ ಕಾರ್ಮಿಕರಾಗಿ ಊರೂರು ಸುತ್ತಿ ಬೀದಿ ಬದಿ ಡೇರೆ ಹಾಕಿ ಜೀವನ ನಡೆಸುತ್ತಿದ್ದರು. 1995ರ ಸಮಯ ಏಕಾಏಕಿ ಕಾಣೆಯಾದ ತಂದೆಯ ನೆನಪಲ್ಲೇ ತಾಯಿ ಪ್ರೇಮ ಹಾಗೂ ಅವರ ಮೂವರು ಮಕ್ಕಳಾದ ಶಿವ, ಭೋಜ ಹಾಗೂ ಮಮತಾ ಅವರು ಪಜೀರು, ಪಾವೂರು, ಇನೋಳಿಯ ರಸ್ತೆ ಬದಿ, ಶೌಚ ಕೊಠಡಿ, ದನದ ಹಟ್ಟಿಯಲ್ಲಿ ವಾಸವಾಗಿದ್ದರು. ಶಿವ ಕ್ಯಾನ್ಸರ್ ಕಾಯಿಲೆ ತುತ್ತಾಗಿ ಅನಾರೋಗ್ಯದಿಂದಿದ್ದು, ಭೋಜ ಹಾಗೂ ಮಮತಾ ಅವರನ್ನು ಸ್ಥಳೀಯ ಶಿಕ್ಷಕ ಮಧು ಮೇಷ್ಟ್ರು ತನ್ನದೇ ಮುತುವರ್ಜಿಯಲ್ಲಿ ಮಲಾರ್ ಪದವು ಶಾಲೆಗೆ ಸೇರಿಸಿದ್ದರು.

ಪತಿ ನಾಪತ್ತೆಯಾದ ದುಃಖದ ನಡುವೆಯೂ ತಾಯಿ ಪ್ರೇಮ ಸ್ಥಳೀಯ ಕೋರೆ, ಮನೆ ಮನೆ ತೆರಳಿ ಮನೆ ಗೆಲಸ ಮಾಡಿ ವಿದ್ಯಾಭ್ಯಾಸ ನಡೆಸುವ ಮಕ್ಕಳ ಜತೆ ಡೇರೆಯಲ್ಲೇ ದಿನ ಕಳೆದಿದ್ದರು. 2006ರಿಂದ ಮಮತಾ ಅವರು ಮಚ್ಚಿನ ಮೊರಾರ್ಜಿ ದೇಸಾಯಿ ವಿದ್ಯಾಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ, ಬಳಿಕ ದೇರಳಕಟ್ಟೆ ಮೊರಾರ್ಜಿ ದೇಸಾಯಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಿಯುಸಿ ಪಾಸಾಗಿದ್ದರು. ನಂತರ ಮಂಗಳೂರಿನ ಕೊಲಾಸೋ ವಿದ್ಯಾಸಂಸ್ಥೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಡಿಪ್ಲೋಮಾ ಪದವಿ ಪೂರೈಸಿದ್ದರು.
ಬೆಳ್ತಂಗಡಿಯಲ್ಲಿ ಬಿಜೆಪಿ ಬೆಂಬಲಿತರ ಭರ್ಜರಿ ಬೇಟೆ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಜಯೋತ್ಸವ!

ಉನ್ನತ ಶಿಕ್ಷಣ ಪಡೆಯಬೇಕೆಂಬ ಆಸೆಯಿಂದ ಕೆಲ ದಾನಿಗಳ ಸಹಕಾರದಿಂದ ಬೆಂಗಳೂರಿಗೆ ಆಗಮಿಸಿದ ಮಮತಾ ನಾಲ್ಕು ವರ್ಷಗಳ ಕಾಲ ಬೆಂಗಳೂರು ನಗರದಲ್ಲಿರುವ ಬೆಂಗಳೂರು ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, 2020ರಲ್ಲಿ ಮೆಡಿಕಲ್ ವಿಭಾಗದಲ್ಲಿ ಬಿಎಸ್ಸಿ ಪದವೀಧರೆಯಾಗಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದರು. ಲಕ್ಷಾಂತರ ರೂ. ವೆಚ್ಚಮಾಡಿ ಶಿಕ್ಷಣ ಪಡೆಯುವ ಸಾವಿರಾರು ವಿದ್ಯಾರ್ಥಿಗಳ ಮಧ್ಯೆ ಬೆಂಗಳೂರಿನ ಆನೆಪಾಳ್ಯ ಎಂಬ ಕೊಳೆಗೇರಿ ಪ್ರದೇಶದಲ್ಲಿ ವಾಸಿಸುತ್ತಲೇ ಮಮತಾ ಅವರು ಮೆಡಿಕಲ್ ಬಿಎಸ್ಸಿ ಪದವೀಧರೆಯಾಗಿದ್ದರು.
ಉಜಿರೆಯಲ್ಲಿ'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ಎಸ್‌ಡಿಪಿಐ

ನನ್ನ ಜೀವನ ನನಗೆ ಬದುಕುವ ಪಾಠ ಕಲಿಸಿದೆ. ದೇಶದ ಸಾಮಾಜಿಕ ಹಾಗೂ ರಾಜಕೀಯ ವ್ಯವಸ್ಥೆಯಲ್ಲಿಸಂಪತ್ತಿನ ಸಮಾನ ಹಂಚಿಕೆ, ಬಳಕೆಯಾಗದಿರುವುದರಿಂದಲೇ ಹಳ್ಳಿಯ ಜನರು ಬಡತನದಲ್ಲೇ ಕಾಲ ಕಳೆಯುವಂತಾಗಿದೆ. ನನಗೆ ನನ್ನ ಜೀವನ ರೂಪಿಸುವಂತಹ ಶಿಕ್ಷಣ ದೊರಕಿದ್ದರೇನಂತೆ ಗ್ರಾಮೀಣ ಜನತೆ ಇನ್ನೂ ತಮ್ಮ ಸ್ವಂತ ಜೀವನ ರೂಪಿಸುವಂತಹ ವ್ಯವಸ್ಥೆಯಾಗಿಲ್ಲ. ಈ ನಿಟ್ಟಿನಲ್ಲಿ ನಾನು ಓಡಾಡಿ ಬೆಳೆದ ಹಳ್ಳಿಗೆ ಮತ್ತೆ ಹಿಂತಿರುಗುವ ಯೋಜನೆ ಮಾಡಿದೆ. ಪ್ರಸ್ತುತ ನನ್ನ ಯೋಜನೆಗೆ ರಾಜಕೀಯ ಬೆಂಬಲವೂ ಸಿಕ್ಕಿದೆ. ನಾನು ನಡೆದು ಬಂದ ಅಲೆಮಾರಿ ಜೀವನ, ಕಷ್ಟದ ದಾರಿ ನನಗೆ ನೆನಪಿದೆ, ಅಂತಹ ಕಷ್ಟ ಮುಂದೆ ಯಾರಿಗೂ ಬರಬಾರದು ಎಂಬ ಆಸೆಯೊಂದಿಗೆ ರಾಜಕೀಯ ಪ್ರವೇಶಿಸಿದ್ದೇನೆ ಎಂದು ಪಾವೂರು ಗ್ರಾಪಂನ ನೂತನ ಸದಸ್ಯೆ ಮಮತಾ ತಿಳಿಸಿದ್ದಾರೆ.
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...