ಬ್ರೇಕಿಂಗ್‌ ನ್ಯೂಸ್‌: 180 ಮಂದಿಯಿದ್ದ ಉಕ್ರೇನ್‌ ವಿಮಾನ ಇರಾನ್‌ನಲ್ಲಿ ಪತನ

ಟೆಹ್ರಾನ್‌: 180 ಪ್ರಯಾಣಿಕರು ಮತ್ತು ವಿಮಾನಯಾನ ಸಿಬ್ಬಂದಿಯನ್ನು ಹೊತ್ತ ಉಕ್ರೇನ್‌ ವಿಮಾನವು ರಾಜಧಾನಿ ಟೆಹ್ರಾನ್‌ನ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ. ಈ ಸಂಬಂಧ ಇರಾನ್‌ನ ಫಾರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಟೆಹ್ರಾನ್‌ನ ಇಮಾಮ್ ಖೊಮೇನಿ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ನಂತರ ತಾಂತ್ರಿಕ ಸಮಸ್ಯೆಗಳಿಂದಾಗಿ ಉಕ್ರೇನ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್‌ನ ಬೋಯಿಂಗ್ 737 ವಿಮಾನ ಬುಧವಾರ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ ಸಿಬ್ಬಂದಿ ಸೇರಿ 180 ಮಂದಿ ಇದ್ದರು ಎಂದು ತಿಳಿದುಬಂದಿದೆ. ಸಾವುನೋವಿನ ಬಗ್ಗೆ ಸದ್ಯ ಯಾವುದೇ ತಿಳಿದುಬಂದಿಲ್ಲ. ಇರಾನ್‌ ರಾಜಧಾನಿ ಟೆಹ್ರಾನ್‌ನ ಇಮಾಮ್ ಖೊಮೇನಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಪತನಕ್ಕೀಡಾಗಿದೆ ಎಂದು ವರದಿ ತಿಳಿಸಿದೆ. ತಾಂತ್ರಿಕ ಸಮಸ್ಯೆಗಳಿಂದ ಅಪಘಾತ ಉಂಟಾಗಿದೆ ಎಂದು ಶಂಕಿಸಲಾಗಿದೆ. ಟೆಹ್ರಾನ್‌ನ ನೈರುತ್ಯ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ತನಿಖಾ ತಂಡ ಧಾವಿಸಿದೆ ಎಂದು ನಾಗರಿಕ ವಿಮಾನಯಾನ ವಕ್ತಾರ ರೆಜಾ ಜಾಫರ್ಜಾಡೆ ತಿಳಿಸಿದ್ದಾರೆ. ಉಕ್ರೇನ್ ಅಂತಾರಾಷ್ಟ್ರೀಯ ಏರ್‌ಲೈನ್ಸ್‌ನ ಉಕ್ರೇನಿಯನ್ 737-800 ವಿಮಾನ ಬುಧವಾರ ಬೆಳಿಗ್ಗೆ ಹೊರಟಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ರಾಡಾರ್‌ ಮಾಹಿತಿ ನೀಡುವುದನ್ನು ನಿಲ್ಲಿಸಿದೆ ಎಂದು ಸ್ಥಳೀಯ ವೆಬ್‌ಸೈಟ್‌ವೊಂದು ತಿಳಿಸಿದೆ. ಖಾಸಿಮ್‌ ಸುಲೈಮಾನಿ ಹತ್ಯೆಗೆ ಪ್ರತೀಕಾರವಾಗಿ ಅಮೆರಿಕದ ಎರಡು ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಮಿಸೈಲ್‌ ದಾಳಿ ನಡೆಸಿದ ಕೆಲವೇ ಗಂಟೆಗಳ ಹೊತ್ತಿನಲ್ಲಿ ಉಕ್ರೇನ್‌ ವಿಮಾನ ಇರಾನ್‌ ರಾಜಧಾನಿ ಟೆಹ್ರಾನ್‌ ವಿಮಾನ ನಿಲ್ದಾಣದ ಬಳಿ ಪತನಗೊಂಡಿದೆ.


from India & World News in Kannada | VK Polls https://ift.tt/36u7WRb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...