ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ತಾಜಾ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ. ಈ ಮಧ್ಯೆ ಉಪನಾಯಕ ಅಜಿಂಕ್ಯ ರಹಾನೆ ಎಂಟನೇ ಸ್ಥಾನಕ್ಕೆ ಮುನ್ನಡೆಯನ್ನು ಪಡೆದಿದ್ದಾರೆ. ವಿರಾಟ್ ಕೊಹ್ಲಿ ಬಳಿ ಈಗ ಒಟ್ಟು 928 ಅಂಕಗಳಿವೆ. 2ನೇ ಸ್ಥಾನದಲ್ಲಿರುವ ಆಸ್ಪ್ರೇಲಿಯಾದ ಸ್ಟೀವ್ ಸ್ಮಿತ್ 911 ಅಂಕಗಳನ್ನು ಹೊಂದಿದ್ದಾರೆ. ಈ ಮೂಲಕ 17 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಸೇರಿದಂತೆ ಭಾರತದ ಮೂವರು ಬ್ಯಾಟ್ಸ್‌ಮನ್ ಗಳು ಟಾಪ್ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಚೇತೇಶ್ವರ್ ಪೂಜಾರ (791 ಅಂಕ) ಹಾಗೂ ಅಜಿಂಕ್ಯ ರಹಾನೆ (759 ಅಂಕ) ಅನುಕ್ರಮವಾಗಿ 7 ಮತ್ತು 8ನೇ ಸ್ಥಾನ ಗಳಿಸಿದ್ದಾರೆ. ಬೌಲರ್‌ಗಳ ರಾರಯಂಕಿಂಗ್ ನಲ್ಲಿ ಭಾರತದ ವೇಗಿ ಜಸ್‌ಪ್ರಿತ್ ಬುಮ್ರಾ (794 ಅಂಕ) ನಾಲ್ಕನೇ ಸ್ಥಾನ ಗಳಿಸಿದ್ದಾರೆ. ಇನ್ನು, ಆಲ್‌ರೌಂಡರ್ ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ (438) ಮೂರನೇ ಸ್ಥಾನ ತಲುಪಿದ್ದಾರೆ. ಇನ್ನು ಬೌಲಿಂಗ್ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ಮೊಹಮ್ಮದ್ ಶಮಿ ಅಗ್ರ 10ರ ಪಟ್ಟಿಯದ್ದಾರೆ. ಅಶ್ವಿನ್ ಎಂಟು ಹಾಗೂ ಶಮಿ 10ನೇ ಸ್ಥಾನದಲ್ಲಿದ್ದಾರೆ. ಜಿಂಬಾಬ್ವೆ ವಿರುದ್ಧ ಅಮೋಘ ದ್ವಿಶತಕ ಸಾಧನೆ ಮಾಡಿರುವ ಶ್ರೀಲಂಕಾದ ಹಿರಿಯ ಅನುಭವಿ ಬ್ಯಾಟ್ಸ್‌ಮನ್ ಆ್ಯಂಗಲೋ ಮ್ಯಾಥ್ಯೂಸ್ ಟಾಪ್ 10ರ ಪಟ್ಟಿಗೆ ಲಗ್ಗೆಯಿಟ್ಟಿದ್ದಾರೆ. ಚೊಚ್ಚಲ ದ್ವಿಶತಕ ಬಾರಿಸಿರುವ ಮ್ಯಾಥ್ಯೂಸ್ 16ನೇ ಸ್ಥಾನಕ್ಕೆ ತಲುಪಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/38HLNj7