ಉತ್ತರ ಪ್ರದೇಶ: ಕನೌಜ್‌ ಬಳಿ ಭೀಕರ ಅಪಘಾತ, ಬಸ್‌-ಲಾರಿ ಡಿಕ್ಕಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕನೌಜ್‌: ಉತ್ತರ ಪ್ರದೇಶದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕನೌಜ್‌ ಜಿಲ್ಲೆಯ ಗಿಹೋಲಿ ಗ್ರಾಮದ ಚಿಬ್ರಮೌ ಸಮೀಪ ಈ ದುರ್ಘಟನೆ ಸಂಭವಿಸಿದೆ. ಖಾಸಗಿ ಬಸ್‌ವೊಂದು ಲಾರಿಗೆ ಡಿಕ್ಕಿ ಹೊಡೆಯಿತು. ಅಪಘಾತ ಸಂಭವಿಸಿದ ಕೂಡಲೇ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತು. ಇದದಿಂದಾಗಿ ತೀವ್ರ ನಷ್ಟ ಸಂಭವಿಸಿತು. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಬಸ್‌ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಈ ಬಸ್‌ ಕನೌಜ್‌ನಿಂದ ಜೈಪುರಕ್ಕೆ ಪ್ರಯಾಣಿಸುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.


from India & World News in Kannada | VK Polls https://ift.tt/2R9fna3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...