ನಿರ್ಭಯಾ ಅತ್ಯಾಚಾರಿಗಳಿಗೆ ಜನವರಿ 22ರ ಬೆಳಗ್ಗೆ 7 ಗಂಟೆಗೆ ಗಲ್ಲು ಶಿಕ್ಷೆ: ದಿಲ್ಲಿ ಕೋರ್ಟ್ ಆದೇಶ

ಹೊಸದಿಲ್ಲಿ: 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಹೊರಬಿದ್ದಿದ್ದು ಜಾರಿಗೊಳಿಸಲಾಗಿದೆ. ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲುಶಿಕ್ಷೆ ಫಿಕ್ಸ್ ಮಾಡಿ ದೆಹಲಿಯ ಪಟಿಯಾಲ ಹೌಸ್‌ ಕೋರ್ಟ್‌ ತೀರ್ಪು ನೀಡಿದೆ. ನ್ಯಾ. ಸತೀಶ್‌ ಕುಮಾರ್‌ ಅರೋರಾ ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ತೀರ್ಪಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ ನಿರ್ಭಯಾ ತಾಯಿ ಆಶಾ ದೇವಿ, ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿರುವುದರಿಂದ ತನ್ನ ಮಗಳಿಗೆ ನ್ಯಾಯ ಸಿಕ್ಕಂತಾಗಿದೆ ಎಂದರು. 4 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿರುವುದು ದೇಶದ ಮಹಿಳೆಯರಿಗೆ ಅಧಿಕಾರ ನೀಡಿದಂತಾಗಿದೆ. ಈ ನಿರ್ಧಾರದಿಂದ ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಬಲಪಡಿಸುತ್ತದೆ ಎಂದೂ ನಿರ್ಭಯಾ ತಾಯಿ ಅಭಿಪ್ರಾಯ ಪಟ್ಟಿದ್ದಾರೆ. ಪ್ರಕರಣದ ವಿಚಾರಣೆ ಮಂಗಳವಾರ ಬೆಳಗ್ಗೆಯಿಂದ ನಡೆದಿತ್ತು. ಮಧ್ಯಾಹ್ನ 3.30ಕ್ಕೆ ತೀರ್ಪನ್ನು ಕಾಯ್ದಿರಿಸಲಾಗಿತ್ತು.


from India & World News in Kannada | VK Polls https://ift.tt/2FoPAVM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...