ಟರ್ಕಿಯಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ: 18 ಮಂದಿ ಬಲಿ, 553 ಮಂದಿಗೆ ಗಾಯ

ಟರ್ಕಿ: ಪೂರ್ವ ಟರ್ಕಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿ ನೂರಾರು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ರಾಜಧಾನಿ ಅಂಕರಾದಲ್ಲಿ 550 ಕಿ.ಮೀವರೆಗೂ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿದೆ. ಭೂಕಂಪನಕ್ಕೆ ಕುಸಿದಿರುವ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವರನ್ನು ರಕ್ಷಿಸುವ ಕಾರ್ಯಾಚರಣೆ ಭರದಿಂದ ಸಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.8 ನಷ್ಟು ದಾಖಲಾಗಿದೆ. ಘಟನೆ ಬಳಿಕ ಕನಿಷ್ಠ 30 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಕೇಂದ್ರ ಬಿಂದು ಎಲಾಝಿಗ್ ಪೂರ್ವ ಪ್ರಾಂತ್ಯದ ಸಿರ್ವಿಕ್ ಎಂಬಲ್ಲಿನ ಸರೋವರದ ಪಕ್ಕದಲ್ಲಿ ಪತ್ತೆಯಾಗಿದೆ. ಭೂಕಂಪ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಕ್ರಮ ಕೈಗೊಳ್ಳುತ್ತೆವೆ. ನಮ್ಮ ಜನರ ಬೆಂಬಲಕ್ಕೆ ನಾವಿದ್ದೇವೆ ಎಂದು ಅಧ್ಯಕ್ಷ ರೆಸಿಪ್ ತಯ್ಯಬ್ ಎರ್ದೊಗಾನ್ ಟ್ವೀಟ್ ಮಾಡಿದ್ದಾರೆ. ದುರಂತದ ಹಿನ್ನೆಲೆಯಲ್ಲಿ ದೇಶಾದ್ಯಂತ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಮನೆಗಳಿಂದ ಹೊರಕ್ಕೆ ಓಡಿಬಂದ ಜನ, ಮೈಕೊರೆಯುವ ಚಳಿಯಿಂದ ತಪ್ಪಿಸಿಕೊಳ್ಳಲು ಬೀದಿಗಳಲ್ಲಿ ಬೆಂಕಿ ಹಚ್ಚಿ ಕುಳಿತಿದ್ದಾರೆ. ಮೃತ 18 ಮಂದಿಯಲ್ಲಿ , 13 ಮಂದಿ ಎಲಾಝಿಗ್ ಪ್ರಾಂತ್ಯದಲ್ಲಿ ಹಾಗೂ ಐದು ಮಂದಿ ಸಮೀಪದ ಮಲಾತ್ಯ ಪ್ರಾಂತ್ಯದಲ್ಲಿ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ 553 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಈ ಹಿಂದೆ 1999ರ ಆಗಸ್ಟ್ನಲ್ಲಿ ಟರ್ಕಿಯ ಇಸ್ತಾಂಬುಲ್ನ ಇಜ್ಮಿಟ್ ನಗರದಲ್ಲಿ 7.6 ತೀವ್ರತೆಯ ಭೂಕಂಪವಾಗಿ ಸುಮಾರು 17 ಸಾವಿರ ಮಂದಿ ಸಾವನ್ನಪ್ಪಿದ್ದರು. 5 ಲಕ್ಷ ಮಂದಿ ನಿರಾಶ್ರಿತರಾಗಿದ್ದರು. 2011ರಲ್ಲಿ ವಾನ್ ಮತ್ತು ಎರಿಕ್ಸ್ ನಗರಗಳಲ್ಲಿ ಭೂಕಂಪನ ಸುಮಾರು 523 ಮಂದಿ ಸಾವಿಗೀಡಾಗಿದ್ದರು. ಈ ಎರಡು ದುರಂತಗಳ ಬಳಿಕ ಕಂಡಿರುವ ಮೂರನೇ ಪ್ರಬಲ ಭೂಕಂಪನ ಇದೆಂದು ಹೇಳಲಾಗಿದೆ.


from India & World News in Kannada | VK Polls https://ift.tt/37rNQYa

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...