ಸಾವಯವ ಕೃಷಿಗೆ ಉತ್ತೇಜನ; ಹೆಕ್ಟೇರ್‌ಗೆ 75 ಸಾವಿರ ರೂ. ಅನುದಾನ

ಬೆಂಗಳೂರು: ರಾಜ್ಯದಲ್ಲಿ ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಲು ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಬಿಜೆಪಿ ಕರ್ನಾಟಕ ಸರಣಿ ಟ್ವೀಟ್‌ಗಳ ಮೂಲಕ ಮಾಹಿತಿ ನೀಡಿದೆ ತುಮಕೂರಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಈಗಾಗಲೇ ಕೃಷಿ ಸಮ್ಮಾನ್ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಇದಕ್ಕೆ ಜತೆಯಾಗಿ ಸರಕಾರ ರೈತರಿಗೆ ಪೂರಕವಾಗುವ ಮಹತ್ವದ ಯೋಜನೆಗಳನ್ನು ಪ್ರಕಟಿಸಿದೆ. ಇದರ ಅನ್ವಯ ಸಾವಯವ ಕೃಷಿಯನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಒಟ್ಟು 28 ಲಕ್ಷ ಹೆಕ್ಟೇರ್‌ನಲ್ಲಿ ಈಗ ಮಾಡಲಾಗುತ್ತಿದೆ. ಮೂರು ವರ್ಷಗಳಿಗಾಗಿ ಪ್ರತಿ ಹೆಕ್ಟೇರ್‌ಗೆ ತಲಾ 75 ಸಾವಿರ ರೂ. ಆರ್ಥಿಕ ಅನುದಾನ ನೀಡಲು ನಿರ್ಧರಿಸಲಾಗಿದೆ. ಸಾವಯವ ಕೃಷಿಯಿಂದ ಶೇಕಡ 10 ರಿಂದ 20ರಷ್ಟು ಉತ್ಪಾದನಾ ವೆಚ್ಚ ಕಡಿಮೆಯಾಗುತ್ತದೆ. ಜತೆಗೆ ಆದಾಯ ಪ್ರಮಾಣ ಶೇಕಡ 20 ರಿಂದ 50ರಷ್ಟು ಗಳಿಕೆ ಹೆಚ್ಚಾಗಲಿದೆ ಎಂದು ತಿಳಿಸಲಾಗಿದೆ. ಕೃಷಿಕರ ಆದಾಯ ದುಪ್ಪಟ್ಟು ಮಾಡಲು ಮಹತ್ವ ಯೋಜನೆ ಕೈಗೊಳ್ಳಲಾಗಿದೆ. ಎಲ್ಲ ರೈತರಿಗೂ ಪ್ರಧಾನಮಂತ್ರಿ ಕಿಸಾನ್‌ ರಕ್ಷಣೆಯಡಿ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟು 7.5 ಕೋಟಿ ರೈತರು ಪ್ರಧಾನಮಂತ್ರಿ ಕಿಸಾನ್‌ ಯೋಜನೆಯ ಫಲಾನುಭವಿಗಳಾಗಿದ್ದಾರೆ. 34,783 ಕೋಟಿ ರೂ.ಗಳನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ. ದೇಶದ ಅನ್ನದಾತರರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.


from India & World News in Kannada | VK Polls https://ift.tt/2QDWvzD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...