ದಿಲ್ಲಿ ವಿಧಾನಸಭಾ ಚುನಾವಣೆಗೆ ಫೆಬ್ರವರಿ 8 ರಂದು ಮತದಾನ

ಹೊಸದಿಲ್ಲಿ: ಈ ವರ್ಷದ ಮೊದಲ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಈ ವರ್ಷದ ಫೆಬ್ರವರಿ 8 ರಂದು ಮತದಾನ ನಡೆಯಲಿದ್ದರೆ, ಫೆಬ್ರವರಿ 11 ರಂದು ಫಲಿತಾಂಶ ಹೊರಬೀಳಲಿದೆ. ದಿಲ್ಲಿಯಲ್ಲಿ ಒಟ್ಟು 70 ವಿಧಾನಸಭಾ ಸ್ಥಾನಗಳಿವೆ. ದಿಲ್ಲಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್‌ ಅರೋರಾ ಚುನಾವಣಾ ದಿನಾಂಕ ಘೋಷಣೆ ಮಾಡಿದರು. ಒಟ್ಟು 1,46,92,136 ಜನರು ಮತದಾನದ ಹಕ್ಕು ಹೊಂದಿದ್ದಾರೆ. 13,750 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ದಿಲ್ಲಿಯಲ್ಲಿ ಇಂದಿನಿಂದಲೇ ಅಂದರೆ ಜನವರಿ 6 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷ ಮೀರಿದ ಹಿರಿಯ ಮತದಾರರಿಗೆ ಪೋಸ್ಟಲ್‌ ಬ್ಯಾಲೆಟ್‌ ಮುಖಾಂತರ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ. 2015ರಲ್ಲಿ ನಡೆದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ನೇತೃತ್ವದ ಆಮ್‌ ಆದ್ಮಿ ಪಕ್ಷ (ಎಎಪಿ) ದೇಶದ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ಭರ್ಜರಿ ಜಯ ದಾಖಲಿಸಿತ್ತು. 70 ಕ್ಷೇತ್ರಗಳಲ್ಲಿ ಏಕಸ್ವಾಮ್ಯತೆ ಮೆರೆದಿದ್ದ ಪಕ್ಷ 67 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಬಿಜೆಪಿ ಕೇವಲ ಮೂರು ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿತ್ತು. ಎರಡನೇ ಬಾರಿಗೆ ಮತ್ತೆ ಅಧಿಕಾರಕ್ಕೇರುವ ಉತ್ಸಾಹದಲ್ಲಿ ಎಎಪಿ ಪಕ್ಷವಿದೆ. ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ದಿಲ್ಲಿಯಲ್ಲಿ ಅಧಿಕಾರಕ್ಕೇರುವಲ್ಲಿ ವಿಫಲವಾಗಿರುವ ಬಿಜೆಪಿ ಈ ಬಾರಿಯಾದರೂ ಗೆಲ್ಲಬೇಕು ಎಂದು ಪಣ ತೊಟ್ಟಿದೆ. ಇವರಿಬ್ಬರ ಮಧ್ಯೆ ಸತತ 15 ವರ್ಷ ದೆಹಲಿಯನ್ನು ಆಳಿದ ಕಾಂಗ್ರೆಸ್‌ ತೀವ್ರ ಪೈಪೋಟಿ ಒಡ್ಡುತ್ತಿದೆ.


from India & World News in Kannada | VK Polls https://ift.tt/2FmZ8AF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...