ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ: ಮನೆಮಾಡಿದ ಯುದ್ಧಭೀತಿ

ಬಾಗ್ದಾದ್‌: ಇರಾನ್ ತನ್ನ ಸೇನಾ ಕಮಾಂಡರ್ ಖಾಸಿಂ ಸುಲೈಮಾನಿ ಹತ್ಯೆ ಮಾಡಿದ ಅಮೆರಿಕದ ವಿರುದ್ಧ ಸೇಡು ತೀರಿಸಿಕೊಳ್ಳ ಮೊದಲು ಮಾಡಿದೆ. ಇರಾಕ್‌ನಲ್ಲಿರುವ ಸೇನಾ ನೆಲೆಗಳ ಮೇಲೆ ಇರಾನ್‌ ಮಂಗಳವಾರ ರಾತ್ರಿ( ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10:30) 12ಕ್ಕೂ ಹೆಚ್ಚು ಖಂಡಾಂತರ ಕ್ಷಿಪಣಿಗಳನ್ನು ಸಿಡಿಸಿದೆ. ಸಾವು ಹಾಗೂ ನಷ್ಟದ ಕುರಿತು ಸೇನೆ ಇದುವರೆಗೂ ಅಧಿಕೃತ ಮಾಹಿತಿ ಬಹಿರಂಗಪಡಿಸಿಲ್ಲ. ಅಮೆರಿಕಾದ ಸೇನಾ ಪಡೆಯ ನೆಲೆಗಳ ಮೇಲೆ ದಾಳಿ ನಡೆಸಿದರು ಅತ್ಯಾಧುನಿಕ ತಂತ್ರಜ್ಞಾನದ ಆಯುಧಗಳ ಮೂಲಕ ತಕ್ಕ ಉತ್ತರ ನೀಡಲಾಗುವುದು ಎಂಬ ಖಡಕ್ ಎಚ್ಚರಿಕೆಯನ್ನು ಇರಾನ್‌ಗೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದರು. ಆದರೆ, ಇದೀಗ ಇರಾನ್‌ ಟ್ರಂಪ್‌ ಎಚ್ಚರಿಕೆಯನ್ನೂ ಲೆಕ್ಕಿಸದೆ, ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಯುದ್ಧಭೀತಿ ಎದುರಾಗಿದೆ.


from India & World News in Kannada | VK Polls https://ift.tt/37GLqVe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...