ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖಂಡನ ಗುಂಡಿಕ್ಕಿ ಹತ್ಯೆ

ಲಕ್ನೋ: ಉತ್ತರಪ್ರದೇಶದ ಮಾವೋ ಜಿಲ್ಲೆಯ ಮುಹಮ್ಮದಾಬಾದ್ ನಲ್ಲಿ ಸಮಾಜವಾದಿ ಪಕ್ಷದ(ಎಸ್ ಪಿ) ಮುಖಂಡ ಬಿಜ್ಲಿ ಯಾದವ್(40) ಎಂಬವರನ್ನು ಅಪರಿಚಿತರು ಗುಂಡಿಕ್ಕಿ ಕೊಂಡಿರುವ ಘಟನೆ ನಡೆದಿದೆ. ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದ್ದು, ಬೆಳಗ್ಗೆ ಹೊಲಕ್ಕೆ ಹೋಗುವಾಗ ಗುಂಡು ಹಾರಿಸಿದರು. ಗುಂಡು ತಗುಲಿದ ಯಾದವ್ ಕುಸಿದುಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದರು. ಸುದ್ದಿ ತಿಳಿದು ಸ್ಥಳದಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿ ಸ್ಥಳೀಯ ಆಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯಾದವ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಯಾದವ್ ಹತ್ಯೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಆರೋಪಿಸಿದ್ದಾರೆ.


from India & World News in Kannada | VK Polls https://ift.tt/2tNh8lb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...