ಇರಾಕ್‌ಗೆ ಪ್ರಯಾಣಿಸದಂತೆ ಕೇಂದ್ರ ಸರಕಾರ ಸಲಹೆ: ಇರಾನ್‌, ಇರಾಕ್‌ಗೆ ವಿಮಾನ ಹಾರಾಟ ಸ್ಥಗಿತ!

ಹೊಸದಿಲ್ಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆ ಇರಾನ್, ಇರಾಕ್ ಮತ್ತು ಕೊಲ್ಲಿಯ ವಾಯುಪ್ರದೇಶಕ್ಕೆ ವಿಮಾನಗಳ ಹಾರಾಟ ನಿಲ್ಲಿಸಿ ಎಂದು ಕೇಂದ್ರ ಸರಕಾರ ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಿದೆ ಎಂದು ಮೋದಿ ಸರಕಾರದ ಮೂಲಗಳು ತಿಳಿಸಿವೆ. ಈ ಸಂಬಂಧ ವಿಮಾನಯಾನ ಸಂಸ್ಥೆಗಳೊಂದಿಗೆ ಸಭೆ ನಡೆಸಿದ್ದೇವೆ ಮತ್ತು ಜಾಗರೂಕರಾಗಿರಲು ಮತ್ತು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದೇವೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮಾಹಿತಿ ನೀಡಿದೆ. ಇರಾಕ್‌ನಲ್ಲಿ ಪ್ರಸಕ್ತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಆದೇಶದ ತನಕ ಅನಿವಾರ್ಯವಿಲ್ಲದೆ ಇರಾಕ್‌ಗೆ ಪ್ರಯಾಣ ಮಾಡಬೇಡಿ ಎಂದು ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದೆ. ಇರಾಕ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳು ಎಚ್ಚರವಾಗಿರಲು ಸಹ ವಿದೇಶಾಂಗ ಇಲಾಖೆ ಸೂಚಿಸಿದೆ. ಈ ಸುದ್ದಿ ಓದಿ: ಇರಾಕ್‌ನಲ್ಲಿ ನೆಲೆಸಿರುವ ಭಾರತೀಯರಿಗೆ ಎಲ್ಲಾ ಸೇವೆಗಳನ್ನು ಒದಗಿಸಲು ಬಾಗ್ದಾದ್‌ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಎರ್ಬಿಲ್‌ನ ಕಾನ್ಸುಲೇಟ್ ಕಚೇರಿ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಇದನ್ನೂ ಓದಿ:


from India & World News in Kannada | VK Polls https://ift.tt/39LcTXQ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...