ಪೌರತ್ವ ಕಾಯಿದೆ ವಿರೋಧಿಸಿದ್ದಕ್ಕೆ ಪ.ಬಂಗಾಳ ಸ್ತಬ್ಧಚಿತ್ರ ನಿರಾಕರಿಸಿದ ಕೇಂದ್ರ-ಟಿಎಂಸಿ

ಹೊಸದಿಲ್ಲಿ: ಆರಂಭದಿಂದಲೂ 'ಪೌರತ್ವ ತಿದ್ದುಪಡಿ ಕಾಯಿದೆಗೆ ಪ್ರಬಲ ವಿರೋಧ ಒಡ್ಡುತ್ತಲೇ ಬಂದಿರುವ ಪ. ಬಂಗಾಳದ ತೃಣಮೂಲ ಕಾಂಗ್ರೆಸ್‌ ಸರಕಾರಕ್ಕೆ ಕೇಂದ್ರ ಸರಕಾರ ಬಿಸಿ ಮುಟ್ಟಿಸಿದೆ. ಗಣರಾಜ್ಯೋತ್ವದಂದು ದಿಲ್ಲಿ ಪರೇಡ್‌ನಲ್ಲಿ ಪಾಲ್ಗೊಳ್ಳಬೇಕಿದ್ದ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ನಿರಾಕರಿಸಿದೆ. ಪೌರತ್ವ ತಿದ್ದುಪಡಿ ಕಾಯಿದೆಗೆ ವಿರೋಧ ಒಡ್ಡುತ್ತಿರುವುದು ಆ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಹೇಳಿರುವ ಕೇಂದ್ರ ಸರಕಾರ ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಪ.ಬಂಗಾಳದ ಸ್ತಬ್ಧಚಿತ್ರವನ್ನು ಬ್ಯಾನ್‌ ಮಾಡಿದೆ. ಈ ಬೆನ್ನ ಪ. ಬಂಗಾಳ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದ್ದು, ತೃಣಮೂಲ ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಕಾನೂನು ಪಾಲನೆ ಮಾಡುತ್ತಿಲ್ಲ. ಕೇಂದ್ರ ಸರಕಾರವು ಸ್ತಬ್ಧಚಿತ್ರವನ್ನು ನಿರಾಕರಿಸಲು ಇದೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದೆ. ಪ.ಬಂಗಾಳ ಸಲ್ಲಿಸಿದ್ದ ಸ್ತಬ್ಧಚಿತ್ರದ ಪ್ರಸ್ತಾವನೆಯನ್ನು ಬುಧವಾರ ರಕ್ಷಣಾ ಸಚಿವಾಲಯವು ತಿರಸ್ಕರಿಸಿತ್ತು. ತಜ್ಞ ಸಮಿತಿಯೊಟ್ಟಿಗೆ ಸಮಾಲೋಚನೆ ನಡೆಸಿದ ನಂತರ ತಿರಸ್ಕರಿಸಲಾಗಿದೆ. ರಕ್ಷಣಾ ಸಚಿವಾಲಯಕ್ಕೆ ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ 56 ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಇದರಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 32 ಹಾಗೂ ಕೇಂದ್ರ ಸಚಿವಾಲಯಗಳಿಂದ 22 ಪ್ರಸ್ತಾವನೆಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 16 ಹಾಗೂ ಕೇಂದ್ರ ಸಚಿವಾಲಯಗಳ 6 ಸ್ತಬ್ಧಚಿತ್ರಗಳು ಅಂತಿಮವಾಗಿ ಆಯ್ಕೆಯಾಗಿವೆ.


from India & World News in Kannada | VK Polls https://ift.tt/35deB0N

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...