ಮಾಸಾಂತ್ಯದೊಳಗೆ ಸಂಪುಟ ವಿಸ್ತರಣೆ; ಬಿಎಸ್‌ವೈ ಭರವಸೆ

ಹಾಸನ: ಮಾಸಾಂತ್ಯದೊಳಗೆ ಸಚಿವ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಜನವರಿಯಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು. ದಾವೋಸ್‌ ಸಮಾವೇಶದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಶುಕ್ರವಾರ ವಾಪಸ್‌ ಆಗಿದ್ದ ಬಿಎಸ್‌ವೈ ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗುತ್ತದೆ ಎಂದಿದ್ದರು. ಆದರೆ ಇದೀಗ ಅದು ಮಾಸಾಂತ್ಯಕ್ಕೆ ಬಂದು ತಲುಪಿದೆ. ಸದ್ಯ ಸಂಪುಟ ವಿಸ್ತರಣೆ ಕಸರತ್ತು ತೀವ್ರ ಸ್ವರೂಪ ಪಡೆದುಕೊಂಡಿದ್ದು ವರಿಷ್ಠರ ಸೂಚನೆ ಸಿಕ್ಕಿದ ಬಳಿಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ದಾವೋಸ್‌ ಭೇಟಿ ಫಲಪ್ರದ ಇದೇ ವೇಳೆ ದಾವೋಸ್ ಭೇಟಿ‌ ಕುರಿತಾಗಿ ಪ್ರತಿಕ್ರಿಯಿಸಿ, ದಾವೋಸ್ ಭೇಟಿ ಅತ್ಯಂತ ಫಲಪ್ರದವಾಗಿದೆ. ರಾಜ್ಯದಲ್ಲಿ ಅನೇಕರು ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ ಎಂದು ಹೇಳಿದರು. ಅಲ್ಲದೆ ಹಲವು ಕೈಗಾರಿಕೋದ್ಯಮಿಗಳು ನಮ್ಮ ರಾಜ್ಯಕ್ಕೆ ಬರಲು ಒಪ್ಪಿದ್ದಾರೆ ಎಂದರು. 40 ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳನ್ನು ತಾವು ವೈಯಕ್ತಿಕವಾಗಿ ಭೇಟಿ ಮಾಡಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿನಂತಿಸಿದ್ದೇನೆ ಅವರು ರಾಜ್ಯದಲ್ಲಿ ಬಂಡವಾಳ ಹೂಡುವ ಭರವಸೆ ಇದೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಎಸ್‌ಎಂ.ಕೃಷ್ಣ ಅವರ ನಂತರ 16 ವರ್ಷಗಳು ಕಳೆದ ಮೇಲೆ ತಾವು ದಾವೂಸ್ ಗೆ ಹೋಗಿದ್ದು ತುಂಬಾ ಉಪಯುಕ್ತವಾಗಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆ ಅಭಿವೃದ್ಧಿ ಮಾಡಲು ಭರವಸೆ ದೊರೆತಿದೆ ಇದರಿಂದ ಕೃಷಿ , ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲೂ ಅನುಕೂಲ ಆಗಲಿದೆ ಎಂದು ಮುಖ್ಯ ಮಂತ್ರಿ ಅವರು ತಿಳಿಸಿದರು .


from India & World News in Kannada | VK Polls https://ift.tt/3aHE1Ye

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...