
ಹೊಸದೆಹಲಿ: ದೆಹಲಿಯಲ್ಲಿ ಮತ್ತೊಂದು ಅಗ್ನಿಅವಘಡ ಸಂಭವಿಸಿದ್ದು ಕಟ್ಟಡದೊಳಗಡೆ ಸಿಲುಕಿಕೊಂಡಿದ್ದ ಹಲವಾರು ಕಾರ್ಮಿಕರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕೊನೆಗೂ ರಕ್ಷಣೆ ಮಾಡಲಾಗಿದೆ. ನಗರದ ಪೀರಾ ಗರ್ಹಿಯ ಉಡೊಹ್ ಕಾರ್ಖಾನೆಯಲ್ಲಿ ಗುರುವಾರ ಮುಂಜಾನೆ ಅಗ್ನಿಅವಘಡ ಸಂಭವಿಸಿದೆ. ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಸಕ ದಳ ದೌಡಾಯಿಸಿದೆ. ಕಟ್ಟಡದೊಳಗಿದ್ದ ಕೆಲವು ಕಾರ್ಮಿಕರನ್ನು ರಕ್ಷಿಸಲಾಗಿದೆ. ಆದರೆ ಕೆಲವು ಕಾರ್ಮಿಕರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದೊಳಗೆ ಸಿಕ್ಕಿಹಾಕಿಕೊಂಡಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್) ತಂಡ ದೌಡಾಯಿಸಿದ್ದು ಬೆಂಕಿ ಅವಘಡದಿಂದ ಕಟ್ಟದೊಳಗೆ ಸಿಲುಕಿ ಹಾಕಿಕೊಂಡ ಕಾರ್ಮಿಕರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ರಕ್ಷಣೆ ಮಾಡುವ ಕಾರ್ಯಾಚರಣೆ ಆರಂಭಿಸಿತ್ತು. ಕಾರ್ಯಾಚರಣೆ ಯಶಸ್ವಿಯಾಗಿದ್ದು ಅಪಾಯದಲ್ಲಿ ಸಿಲುಕಿಕೊಂಡಿದ್ದ ಎಲ್ಲಾ ಕಾರ್ಮಿಕರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಎನ್‌ಡಿಆರ್‌ಎಫ್ ತಂಡ ಸುರಕ್ಷಿತವಾಗಿ ಕಟ್ಟಡದ ಹೊರಗೆ ಕರೆತಂದಿದ್ದಾರೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಘಟನಾ ಸ್ಥಳವನ್ನು ಪರಿಶೀಲಿಸಿದ್ದು ಕಾರ್ಯಾಚರಣೆಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದು. ಇದೊಂದು ಅತ್ಯಂತ ದುಖಃಕರ ಘಟನೆ ಎಂದಿರುವ ಅವರು ಸೂಕ್ತ ಕಾರ್ಯಾಚರಣೆ ನಡೆಸಿ ಕಟ್ಟಡದೊಳಗಡೆ ಸಿಲುಕಿ ಹಾಕಿಕೊಂಡವರನ್ನು ರಕ್ಷಣೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಟ್ವೀಟ್ ಕೂಡಾ ಮಾಡಿದ್ದರು.
from India & World News in Kannada | VK Polls https://ift.tt/2SGImEB