ಹಾಸನ: ನನಗೆ ನಿವೃತ್ತಿಯಾಗುವ ವಯಸ್ಸಾಗಿಲ್ಲ, ರಾಜಕೀಯ ವೈರಾಗ್ಯವೂ ಒಂದಿಲ್ಲ, ರಾಜ್ಯವನ್ನು ಮುನ್ನಡೆಸುವ ಆರೋಗ್ಯ ಇದೆ. ಸಮಯಕ್ಕಾಗಿ ಕಾಯುತ್ತಿದ್ದೇನೆ ಎನ್ನುವ ಮೂಲಕ ಸ್ವೀಕರಿಸುತ್ತಾರೆ ಎಂಬ ಊಹಾಪೋಹಕ್ಕೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತೆರೆ ಎಳೆದರು. ಹಾಸನದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಸರಕಾರವನ್ನು ತೆಗೆಯಬೇಕು ಎಂದು ಮೈಮೇಲೆ ಬಿದ್ದು ಹೋಗಲ್ಲ, ಯಾರಿಗೂ ಹೆದರಿ ಪಲಾಯನವನ್ನು ಮಾಡಲ್ಲ. ಈಗ ಆಗಿರುವ ತಪ್ಪನ್ನು ಸರಿಪಡಿಸಿಕೊಳ್ಳುವ ಕೆಲಸ ಮಾಡಬೇಕಿದೆ ಅದಕ್ಕಾಗಿ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು. ನಾನು ಥೂ, ಛೀ ಎನಿಸಿಕೊಂಡು ರಾಜಕೀಯ ಮಾಡಲ್ಲ, ಅಷ್ಟು ಸುಲಭವಾಗಿ ರಾಜಕೀಯ ಬಿಟ್ಟು ಓಡಿಹೋಗಲ್ಲ, ಜನರ ಪ್ರೀತಿ ಇರುವವರೆಗೆ ರಾಜಕೀಯದಲ್ಲಿ ಮುಂದುವರಿಯುವೆ. ಈ ವಿಷಯದಲ್ಲಿ ಕಥೆ ಕಟ್ಟುವುದು ಬೇಡ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಈಗಾಗಲೇ ನನ್ನ ವಿರುದ್ಧ ಹಾಗೂ ನಮ್ಮ ಕುಟುಂಬದವರ ವಿರುದ್ಧ ಅಪಪ್ರಚಾರಗಳನ್ನು ಮಾಡಲಾಗುತ್ತಿದೆ. ಇದರ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ. ಜನರಿಗೆ ಎಲ್ಲವೂ ಗೊತ್ತಿದೆ. ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಇನ್ನಷ್ಟು ಗಟ್ಟಿಯಾಗಿ ನೆಲೆಯೂರುತ್ತೇವೆ. ಇದಕ್ಕಾಗಿ ಪಕ್ಷ ಸಂಘಟನೆಗೆ ಒತ್ತು ನೀಡಲು ಪಕ್ಷದ ಹಿರಿಯ ನಾಯಕರೆಲ್ಲರೂ ನಿರ್ಧರಿಸಿದ್ದಾರೆ. ಸಂಕ್ರಾಂತಿ ನಂತರ ಕ್ರಾಂತಿಕಾರಿ ಬದಲಾವಣೆ ಮಾಡಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
from India & World News in Kannada | VK Polls https://ift.tt/2ZZbXKT