ಬಿಹಾರದಲ್ಲಿ ಎನ್‌ಆರ್‌ಸಿ ಜಾರಿ ಸಾಧ್ಯವಿಲ್ಲ: ನಿತೀಶ್‌ ಕುಮಾರ್‌

ಪಟನಾ: ಎನ್‌ಡಿಎ ಮೈತ್ರಿಕೂಟದಲ್ಲಿದ್ದರೂ ಬಿಜೆಪಿ ವಿರುದ್ಧವಾಗಿ ಅಂತರ ಇಟ್ಟುಕೊಂಡಿರುವ ನಿತೀಶ್‌ ಕುಮಾರ್‌ ಈಗ ಮತ್ತೊಮ್ಮೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ನಾಗರಿಕ ನೋಂದಣಿ ()ಯನ್ನು ದೇಶಾದ್ಯಂತ ಜಾರಿಗೆ ತರುವುದು ಸೂಕ್ತವಲ್ಲ. ಇದನ್ನು ಸಮರ್ಥನೀಯವೂ ಅಲ್ಲ ಎಂದು ಬಿಹಾರ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಬಿಹಾರ ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ತೇಜಸ್ವಿನಿ ಯಾದವ್‌ ಕೇಳಿದ ಪ್ರಶ್ನೆಗೆ ನಿತೀಶ್‌ ಕುಮಾರ್‌ ಉತ್ತರಿಸಿದರು. ಇಡೀ ರಾಷ್ಟ್ರದಾದ್ಯಂತ ರಾಷ್ಟ್ರೀಯ ನಾಗರಿಕ ನೋಂದಣಿ ಜಾರಿಗೆ ತರುವ ಅಗತ್ಯವಿಲ್ಲ. ಇದು ಸಮರ್ಥನೀಯವೂ ಅಲ್ಲ. ನಮ್ಮ ರಾಜ್ಯದಲ್ಲಿ ಇದು ಸಾಧ್ಯವಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಈ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ನಿತೀಶ್‌ ಕುಮಾರ್‌ ತಿಳಿಸಿದರು. ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧವೂ ಮುಕ್ತ ಹಾಗೂ ಬಹಿರಂಗ ಚರ್ಚೆಗೆ ನಾನು ಸದಾ ಸಿದ್ಧನಾಗಿದ್ದೇನೆ ಎಂದು ನಿತೀಶ್‌ ಕುಮಾರ್‌ ಹೇಳಿದರು.


from India & World News in Kannada | VK Polls https://ift.tt/2Tl0HaG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...