ಭೀಮಾ-ಕೋರೆಗಾಂವ್‌ ಪ್ರಕರಣ ಎನ್‌ಐಎಗೆ, ಮಹಾರಾಷ್ಟ್ರ ಜೊತೆ ಕೇಂದ್ರದ ಸಂಘರ್ಷ

ಹೊಸದಿಲ್ಲಿ: ಎರಡು ವರ್ಷದ ಹಿಂದೆ ನಡೆದ ಭೀಮಾ-ಕೋರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಕೇಸ್‌ಗಳನ್ನು ಹಿಂಪಡೆಯಲು ಸರಕಾರ ಸಿದ್ಧತೆ ನಡೆಸಿದ್ದ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಿದೆ. ಈ ಮೂಲಕ ಕೇಂದ್ರ ಹಾಗೂ ಮಹಾರಾಷ್ಟ್ರ ಸರಕಾರದ ಮಧ್ಯೆ ಮತ್ತೊಂದು ಸುತ್ತಿನ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಕೇಂದ್ರ ಗೃಹ ಸಚಿವಾಲಯ ಭೀಮಾ-ಕೋರೆಗಾಂವ್‌ ಹಿಂಸಾಚಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ()ಗೆ ಹಸ್ತಾಂತರಿಸಿದೆ. "ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಿರುವುದು ಸಂವಿಧಾನ ವಿರೋಧಿಯಾಗಿದೆ. ನಾನು ಕೇಂದ್ರದ ಕ್ರಮವನ್ನು ಖಂಡಿಸುತ್ತೇನೆ," ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಹೇಳಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ದಾರೆ. "ಭೀಮಾ-ಕೋರೆಗಾಂವ್‌ ಹಿಂಸಾಚಾರ ಪ್ರಕರಣದ ಎಲ್ಲಾ ಕೇಸ್‌ಗಳನ್ನು ಹಿಂಪಡೆಯುವ ಮೂಲಕ ನಗರ ನಕ್ಸಲರನ್ನು ಬಿಡುಗಡೆ ಮಾಡಲು ಸಿಎಂ ಉದ್ಧವ್‌ ಠಾಕ್ರೆ ಸರಕಾರ ಯೋಚಿಸಿತ್ತು. ಈಗ ಅದಕ್ಕೆ ಕಡಿವಾಣ ಬೀಳಲಿದೆ," ಎಂದು ಫಡ್ನವಿಸ್‌ ಹೇಳಿದ್ದಾರೆ. 2018ರ ಜನವರಿ 2ರಂದು ಭೀಮಾ-ಕೋರೆಗಾಂವ್‌ ಯುದ್ಧದ 200ನೇ ವರ್ಷದ ವಿಜಯೋತ್ಸವದ ವೇಳೆ ನಡೆದ ಹಿಂಸಾಚಾರದಲ್ಲಿ ಒಬ್ಬ ಮೃತಪಟ್ಟು, 30 ಪೊಲೀಸರು ಗಾಯಗೊಂಡಿದ್ದರು.


from India & World News in Kannada | VK Polls https://ift.tt/2vgOXf3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...