ಕುಮಾರಸ್ವಾಮಿ ಹತ್ಯೆಗೆ ಪಿತೂರಿ ನಡೆಯುತ್ತಿದೆಯಂತೆ!: ಸರಣಿ ಟ್ವೀಟ್‌ನಲ್ಲಿ ವಿಷಯ ಬಹಿರಂಗ

ಬೆಂಗಳೂರು: ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಮಾಜಿ ಮುಖ್ಯ ಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪರೋಕ್ಷವಾಗಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. "ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು" ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಕುಮಾರಸ್ವಾಮಿ ಅವರು ಒಕ್ಕಲಿಗ ಸಮುದಾಯದ ಅಸ್ಮಿತೆಯ ಮೊರೆ ಹೋಗಿದ್ದಾರೆ. ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ, ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ಸರಣಿ ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ. ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗವು ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದಿದ್ದಾರೆ.


from India & World News in Kannada | VK Polls https://ift.tt/2vlBR0h

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...