ಮುಷ್ಕರಕ್ಕೆ ಮುಂದಾದ ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳಿವು

ಬೆಂಗಳೂರು: ಜನವರಿ 8ರಂದು ಕೇಂದ್ರ ಕಾರ್ಮಿಕ ಸಂಘಟನೆಗಳು ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮುಷ್ಕರಕ್ಕೆ ಕರೆ ನೀಡಿವೆ. ದುಡಿಯುವ ಜನರ ಹಕ್ಕುಗಳನ್ನು ಸಂರಕ್ಷಿಸಿ, ಪರ್ಯಾಯ ಆರ್ಥಿಕ ನೀತಿಗಳನ್ನು ಜಾರಿಗೆ ತರಬೇಕು. ಎಲ್ಲ ಕಾರ್ಮಿಕರಿಗೆ ಕನಿಷ್ಠ ವೇತನ 12 ಸಾವಿರ ರೂ. ನಿಗದಿ ಪಡಿಸಬೇಕು ಸೇರಿದಂತೆ ಒಟ್ಟು 13 ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮುಂದಿಟ್ಟಿವೆ. ಪ್ರಮುಖ ಬೇಡಿಕೆಗಳು - 21 ಸಾವಿರ ರೂ. ಕನಿಷ್ಠ ವೇತನ ನಿಗದಿ ಮಾಡಬೇಕು - ಎಲ್ಲರಿಗೂ ಮಾಸಿಕ 10 ಸಾವಿರ ರೂ. ಪಿಂಚಣಿ ನಿಗದಿಪಡಿಸಬೇಕು - ಗುತ್ತಿಗೆ ಪದ್ಧತಿ ನಿಯಂತ್ರಿಸಿ, ಸಮಾನ ವೇತನ ನೀಡಬೇಕು - ರಕ್ಷಣಾ ವಲಯದ ಉದ್ದಿಮೆಗಳು, ರೈಲ್ವೆ ಇಲಾಖೆ ಖಾಸಗೀಕರಣ ಕೈಬಿಡಬೇಕು - ರಕ್ಷಣೆ, ಕಲ್ಲಿದ್ದಲು, ಬ್ಯಾಂಕಿಂಗ್‌, ವಿಮೆ ಕ್ಷೇತ್ರಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಬೇಡ - ಪೌರತ್ವ ತಿದ್ದುಪಡಿ ಕಾಯಿದೆಯನ್ನು ಕೈಬಿಡಬೇಕು. ''ಕಾರ್ಮಿಕ ಸಂಘಟನೆಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬಾಹ್ಯ ಬೆಂಬಲವನ್ನಷ್ಟೇ ನೀಡಲಾಗುತ್ತಿದೆ. ಪ್ರವಾಸಿ ವಾಹನಗಳು, ಟ್ಯಾಕ್ಸಿ ಸೇವೆ ಬಂದ್‌ ಮಾಡುತ್ತಿಲ್ಲ. ಆರ್ಥಿಕ ನಷ್ಟದಿಂದ ಉದ್ಯಮವು ಸಂಕಷ್ಟದಲ್ಲಿದೆ. ಆದ ಕಾರಣ, ಸೇವೆ ಸ್ಥಗಿತಗೊಳಿಸಿದೆ, ಪರೋಕ್ಷವಾಗಿ ಮುಷ್ಕರಕ್ಕೆ ಬೆಂಬಲ ನೀಡಲು ತೀರ್ಮಾನಿಸಲಾಗಿದೆ,'' ಎಂದು ರಾಜ್ಯ ಪ್ರವಾಸಿ ವಾಹನ ಮಾಲೀಕರ ಸಂಘದ ಕೆ.ರಾಧಾಕೃಷ್ಣ ಹೊಳ್ಳ ತಿಳಿಸಿದರು. ''ಮುಷ್ಕರಕ್ಕೆ ಹೋಟೆಲ್‌ ಮಾಲೀಕರ ಬೆಂಬಲವಿಲ್ಲ. ಜನವರಿ 8ರಂದು ಎಲ್ಲ ಹೋಟೆಲ್‌ಗಳು ತೆರೆದಿರುತ್ತವೆ,'' ಎಂದು ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್‌ ತಿಳಿಸಿದ್ದಾರೆ. ಆಟೊ ಚಾಲಕರು ಮತ್ತು ಮಾಲೀಕರ ಸಂಘ, ಸರಕು ಸಾಗಣೆ ಲಾರಿ ಮಾಲೀಕರ ಸಂಘ ಕೂಡ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಜನವರಿ 8ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ರ್ಯಾಲಿ ನಡೆಯಲಿದೆ ಎಂದಿ ಕಾರ್ಮಿಕ ಸಂಘಟನೆಗಳು ತಿಳಿಸಿವೆ. ಮೆರವಣಿಗೆಗೆ ಅವಕಾಶವಿಲ್ಲ: ಕಾರ್ಮಿಕ ಸಂಘಟನೆಗಳು ಜನವರಿ 8ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನಾ ಮೆರವಣಿಗೆ ಬೆಂಗಳೂರಿನಲ್ಲಿ ಅವಕಾಶ ಕೊಡುವುದಿಲ್ಲ ಎಂದು ನಗರ ಪೊಲೀಸ್‌ ಕಮಿಷನರ್‌ ಭಾಸ್ಕರ್‌ ರಾವ್‌ ತಿಳಿಸಿದ್ದಾರೆ. 'ಯಾರೇ ಪ್ರತಿಭಟನೆ ನಡೆಸುವುದಿದ್ದರೂ ಶಾಂತಿಯುತವಾಗಿ ಫ್ರೀಡಂಪಾರ್ಕ್‌ನಲ್ಲಿ ಮಾತ್ರ ನಡೆಸಬೇಕು. ಅದರ ಹೊರತಾಗಿ ಮುಷ್ಕರ, ಪ್ರತಿಭಟನಾ ಮೆರವಣಿಗೆ ನಡೆಸಲು ಅವಕಾಶ ಇಲ್ಲ. ಒಂದು ವೇಳೆ ಅನುಮತಿ ಪಡೆಯದೇ ಮೆರವಣಿಗೆ ನಡೆಸಿದ್ದೇ ಆದರೆ ಸೆಕ್ಷನ್‌ 107ರ ಅಡಿಯಲ್ಲಿ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ, ಅನುಮತಿ ಕೇಳಲು ಬಂದಿದ್ದ ಹತ್ತಾರು ಸಂಘಟನೆಗಳಿಗೆ ಅನುಮತಿ ನೀಡಿಲ್ಲ'' ಎಂದು ಸ್ಪಷ್ಟಪಡಿಸಿದರು. ''ಈಗಾಗಲೇ ಸಾರ್ವಜನಿಕರು ತಮ್ಮ ಹತ್ತಾರು ಸಮಸ್ಯೆಗಳ ಕಾರಣಕ್ಕೆ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಸರಣಿ ಪ್ರತಿಭಟನೆಗಳಿಂದ ನಗರ ಸಂಚಾರ ವ್ಯವಸ್ಥೆ ಮೇಲಿಂದ ಮೇಲೆ ತೊಂದರೆ, ಅಡಚಣೆ ಆಗುತ್ತಿದೆ. ಆದ್ದರಿಂದ ಜನವರಿ 8ರ ಪ್ರತಿಭಟನಾ ಮೆರವಣಿಗೆಗಳಿಗೆ ಅನುಮತಿ ನೀಡುವುದಿಲ್ಲ'' ಎಂದು ಆಯುಕ್ತರು ತಿಳಿಸಿದ್ದಾರೆ.


from India & World News in Kannada | VK Polls https://ift.tt/2QvsuTV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...