ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಮುಂದುವರಿಯುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಿದ್ದಾರೆ. ನಾವು ಹೇಳೋವರೆಗೂ ಅಧ್ಯಕ್ಷರಾಗಿ ಮುಂದುವರಿಯುವಂತೆ ದಿನೇಶ್ ಗುಂಡೂರಾವ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ಸೂಚನೆ ಬಂದಿದೆ. ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ದಿನೇಶ್ ಗುಂಡೂರಾವ್ ಅವರು ಪಕ್ಷದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಮಂಗಳವಾರವೇ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಕರೆದಿದ್ದಾರೆ. ದಿನೇಶ್ ಗುಂಡೂರಾವ್ ಅವರು ಬೆಂಗಳೂರು ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖರ ಜೊತೆ ಸಭೆ ಮಾಡಲಿದ್ದಾರೆ. ಅಧ್ಯಕ್ಷರಾಗಿ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಸಭೆ ಮಾಡುತ್ತಿದ್ದಾರೆ.
from India & World News in Kannada | VK Polls https://ift.tt/2t42ohL