ಪಬ್ಲಿಕ್‌ ಆಸ್ತಿಗೆ ಹಾನಿ ಮಾಡಿದರೆ 'ಉ.ಪ್ರದೇಶದಂತೆ' ಶೂಟ್‌ ಮಾಡಿ ಸಾಯಿಸ್ತೀವಿ: ಬಿಜೆಪಿ ಮುಖಂಡ

ಕೋಲ್ಕತ: ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂದರ್ಭ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ಶೂಟ್‌ ಮಾಡಿ ಸಾಯಿಸುವುದಾಗಿ ಬಿಜೆಪಿ ಮುಖಂಡರೊಬ್ಬರು ಬೆದರಿಕೆ ಹಾಕಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌ ಘೋಷ್‌ ಭಾನುವಾರ ನಾದಿಯಾ ಜಿಲ್ಲೆಯ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತ, ಹೆಸರಿನಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡಿದರೆ 'ಉತ್ತರ ಪ್ರದೇಶದಂತೆ' ಶೂಟ್‌ ಮಾಡಿ ಸಾಯಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಮಮತಾ ಬ್ಯಾನರ್ಜಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ದಿಲೀಪ್‌ ಘೋಷ್‌, ಸಿಎಎ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆದ ವೇಳೆ ರೈಲ್ವೆ ಹಾಗೂ ಸಂಚಾರಿ ಆಸ್ತಿಗೆ ಹಾನಿ ಸಂಭವಿಸುತ್ತಿದ್ದರೂ ಗೋಲಿಬಾರ್ ಮತ್ತು ಲಾಠಿಚಾರ್ಜ್‌ಗೆ ಆದೇಶಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಉತ್ತರ ಪ್ರದೇಶದಂತೆ ಶೂಟ್‌ ಮಾಡಿ ಸಾಯಿಸಬೇಕು ಎಂದಿರುವುದು ಇದೀಗ ಭಾರಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭ ಸಿಎಂ ಯೋಗಿ ಆದಿತ್ಯನಾಥ ಸರಕಾರ ತೆಗೆದುಕೊಂಡ ಕ್ರಮದಿಂದ ಉತ್ತರ ಪ್ರದೇಶದಲ್ಲಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂಬ ಆರೋಪವಿದೆ. ಇದೀಗ 'ಉತ್ತರ ಪ್ರದೇಶದಂತೆ' ಎಂದು ಬೊಟ್ಟು ಮಾಡಿರುವುದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈಲು ಮತ್ತು ಬಸ್‌ಗಳ ಮೇಲೆ ಭಾರಿ ಪ್ರಮಾಣದ ಹಾನಿ ಸಂಭವಿಸಿತ್ತು.


from India & World News in Kannada | VK Polls https://ift.tt/30i9b3r

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...