ಕೊಟ್ಟಿಗೆಪಾಳ್ಯ: BMTC ಬಸ್‌ ಬ್ರೇಕ್‌ ಫೈಲ್ಯೂರ್‌, ಹಲವು ವಾಹನಗಳಿಗೆ ಡಿಕ್ಕಿ, ಓರ್ವ ಸಾವು, ಐವರು ಗಂಭೀರ

ಬೆಂಗಳೂರು: ಬಸ್‌ ಬ್ರೇಕ್‌ ಫೈಲ್ಯೂರ್‌ನಿಂದ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಐದಾರು ಮಂದಿಗೆ ಗಂಭೀರ ಗಾಯಗಳಾಗಿವೆ. ಬಸ್‌ ನಿಲ್ದಾಣದ ಸಮೀಪ ದುರ್ಘಟನೆ ಸಂಭವಿಸಿದೆ. ಸುಂಕದಕಟ್ಟೆ ಕಡೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬ್ರೇಕ್‌ಫೇಲ್‌ ಸಮಸ್ಯೆ ಕಂಡು ಬಂದಿದ್ದು, ನಿಯಂತ್ರಣಕ್ಕೆ ಸಿಗದಿದ್ದುರ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಎರಡು ಬೈಕ್‌ಗಳಿಗೆ, ಒಂದು ಆಟೋಗೆ ಡಿಕ್ಕಿ ಹೊಡೆದಿದೆ. ಹಲವು ವಾಹನಗಳು ಜಖಂಗೊಂಡಿವೆ. ಸ್ಥಳಕ್ಕೆ ಆಗಮಿಸಿದ ಕಾಮಾಕ್ಷಿಪಾಳ್ಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ.


from India & World News in Kannada | VK Polls https://ift.tt/35oEOJB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...