ಆಕ್ಲೆಂಡ್: ನ್ಯೂಜಿಲೆಂಡ್ ಪ್ರವಾಸದಲ್ಲಿ ಮೊದಲ ಟಿ20 ಪಂದ್ಯ ಗೆದ್ದು 5 ಪಂದ್ಯಗಳ ಸರಣಿಯಲ್ಲಿ ಭರ್ಜರಿ ಆರಂಭ ಪಡೆದುಕೊಂಡಿರುವ , ಇದೀಗ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ 2ನೇ ಪಂದ್ಯವನ್ನೂ ಗೆದ್ದು ಪ್ರಾಬಲ್ಯ ಮುಂದುವರಿಸುವ ಲೆಕ್ಕಾಚಾರದಲ್ಲಿದೆ. ಪ್ರಥಮ ಟಿ20 ಹಣಾಹಣಿಯಲ್ಲಿ ಮೊದಲು ಬ್ಯಾಟ್ ಮಾಡಿ 6 ವಿಕೆಟ್‌ಗಳು ಹೀನಾಯ ಸೋಲನುಭವಿಸಿದ್ದ ಕೇನ್ ವಿಲಿಯಮ್ಸನ್ ಪಡೆ, ಈ ಬಾರಿ ಟಾಸ್ ಗೆದ್ದರೂ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳದೆ ಮೊದಲು ಬ್ಯಾಟ್ ಮಾಡಲು ಮುಂದಾಯಿತು. ತಂಡಗಳ ಪ್ಲೇಯಿಂಗ್ 11 ಭಾರತ (ಪ್ಲೇಯಿಂಗ್ 11): ರೋಹಿತ್ ಶರ್ಮಾ, ಲೋಕೇಶ್ ರಾಹುಲ್ (ಕೀಪರ್), ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.
ನ್ಯೂಜಿಲೆಂಡ್ (ಪ್ಲೇಯಿಂಗ್ 11): ಮಾರ್ಟಿನ್ ಗುಪ್ಟಿಲ್, ಕಾಲಿನ್ ಮುನ್ರೊ, ಕೇನ್ ವಿಲಿಯಮ್ಸನ್ (ಸಿ), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ರಾಸ್ ಟೇಲರ್, ಟಿಮ್ ಸೀಫರ್ಟ್ (ಕೀಪರ್), ಮಿಚೆಲ್ ಸ್ಯಾಂಟ್ನರ್, ಬ್ಲೇರ್ ಟಿಕ್ನರ್, ಟಿಮ್ ಸೌಥಿ, ಇಶ್ ಸೋಧಿ, ಹಮೀಶ್ ಬೆನೆಟ್.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2Rq8x16