ಹ್ಯಾಮಿಲ್ಟನ್: ಬ್ಯಾಕ್ ಟು ಬ್ಯಾಕ್ ಗೆಲುವಿನೊಂದಿಗೆ ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲುವನ್ನು ಎದುರು ನೋಡುತ್ತಿರುವ ಟೀಮ್ ಇಂಡಿಯಾ, ಆತಿಥೇಯ ನ್ಯೂಜಿಲೆಂಡ್ ಎದುರು ಹ್ಯಾಟ್ರಿಕ್ ಗೆಲುವಿನೊಂದಿಗೆ ಈ ಸಾಧನೆ ಮಾಡುವ ವಿಶ್ವಾಸದಲ್ಲಿದೆ. ಇಲ್ಲಿನ ಸೆಡಾನ್ ಪಾರ್ಕ್ ಕ್ರೀಡಾಂಗಣದಲ್ಲಿ ಬುಧವಾರ (ಜ.29) ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡಿದೆ. ಮೊದಲೆರಡು ಪಂದ್ಯಗಳಲ್ಲಿ ರನ್ ಚೇಸ್ ಮಾಡಿ ಗೆದ್ದಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿ ನಂತರ ಕಿವೀಸ್ ಪಡೆಯನ್ನು ಕಟ್ಟಿಹಾಕಬೇಕಿದೆ. ನ್ಯೂಜಿಲೆಂಡ್ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ತಂದುಕೊಂಡಿದ್ದು, ವೇಗದ ಬೌಲರ್ ಸ್ಕಾಟ್ ಕುಗ್ಲೇಜಿನ್ಗೆ ಸ್ಥಾನ ನೀಡಿದೆ. ಮತ್ತಂದೆಡೆ ಎರಡು ಗೆಲುವು ತಂದುಕೊಟ್ಟ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ತರಲು ಕ್ಯಾಪ್ಟನ್ ಮುಂದಾಗಿಲ್ಲ. ಇನ್ನು ಹ್ಯಾಮಿಲ್ಟನ್ ಪಿಚ್ ಕೊಂಚ ಬ್ಯಾಟ್ಸ್ಮನ್ಗಳಿಗೆ ನೆರವಾಗುವಂತಿದೆ. ತಂಡಗಳ ವಿವರ ಭಾರತ (ಪ್ಲೇಯಿಂಗ್ ಇಲೆವೆನ್): ರೋಹಿತ್ ಶರ್ಮಾ, ಲೋಕೇಶ್ ರಾಹುಲ್ (ವಿಕೆಟ್ಕೀಪರ್), ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಶಿವಮ್ ದುಬೆ, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ. ನ್ಯೂಜಿಲೆಂಡ್ (ಪ್ಲೇಯಿಂಗ್ ಇಲೆವೆನ್): ಮಾರ್ಟಿನ್ ಗಪ್ಟಿಲ್, ಕಾಲಿನ್ ಮನ್ರೋ, ಕೇನ್ ವಿಲಿಯಮ್ಸನ್ (ನಾಯಕ), ಕಾಲಿನ್ ಡಿ'ಗ್ರ್ಯಾಂಡ್ಹೋಮ್, ರಾಸ್ ಟೇಲರ್, ಟಿಮ್ ಸೀಫರ್ಟ್ (ವಿಕೆಟ್ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥೀ, ಸ್ಕಾಟ್ ಕುಗ್ಲೇಜಿನ್, ಇಶ್ ಸೋಧಿ, ಹ್ಯಾಮಿಶ್ ಬೆನೆಟ್.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2GzaK40