ದೆಹಲಿ ಉದ್ವಿಗ್ನ: 24 ಗಂಟೆಯಲ್ಲಿ ಮೂರು ಬಾರಿ ತುರ್ತು ಸಭೆ ನಡೆಸಿದ ಅಮಿತ್ ಶಾ

ಹೊಸದಿಲ್ಲಿ:ಈಶಾನ್ಯ ದೆಹಲಿಯಲ್ಲಿ ಪೌರತ್ವ ಪರ-ವಿರೋಧಿ ಹೋರಾಟ ತೀವ್ರ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆಯೇ ಗೃಹಸಚಿವ 24 ಗಂಟೆಯಲ್ಲಿ ಮೂರು ಬಾರಿ ತುರ್ತು ಸಭೆ ನಡೆಸಿದರು. ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇರಳ ಪ್ರವಾಸ ಮುಂದೂಡಿ ದೆಹಲಿ ಸಿಎಂ ಹಾಗೂ ಭದ್ರತಾ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ವಿಶೇಷ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಎಸ್.ಎನ್. ಶ್ರೀವಾಸ್ತವ ಕೂಡ ಭಾಗವಹಿಸಿದ್ದರು. ಇದಾದ ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್, ಕಾಂಗ್ರೆಸ್ ಮುಖಂಡ ಸುಭಾಷ್ ಚೋಪ್ರಾ, ಬಿಜೆಪಿಯ ಮನೋಜ್ ತಿವಾರಿ ಮತ್ತು ರಾಮ್‌ವೀರ್ ಬಿಧುರಿ ಅವರೊಂದಿಗೆ ಚರ್ಚಿಸಿದರು. ಈ ಸಭೆಯಲ್ಲಿ, ರಾಜಕೀಯವನ್ನು ಬದಿಗಿಟ್ಟು ಪರಿಸ್ಥಿತಿಯನ್ನು ನಿಭಾಯಿಸಲು ಶ್ರಮಿಸಬೇಕಾಗಿ ಅಮಿತ್ ಶಾ ನಾಯಕರನ್ನು ಕೋರಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಇನ್ನು ತಡರಾತ್ರಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಈಶಾನ್ಯ ದೆಹಲಿಯ ಉಪ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಮಾತುಕತೆ ನಡೆಸಿ ತೆರಳಿದರು ಎಂದು ತಿಳಿದುಬಂದಿದೆ. ಪೌರತ್ವ ಪರ ಮತ್ತು ಪೌರತ್ವ ವಿರೋಧಿ ಕಾನೂನು ಪ್ರತಿಭಟನಾಕಾರರ ನಡುವೆ ಕಳೆದ ನಾಲ್ಕು ದಿನಗಳಿಂದ ನಡೆದ ಗಲಭೆಯಲ್ಲಿ ಈವರೆಗೆ 19 ಮಂದಿ ಮೃತಪಟ್ಟಿದ್ದು 200 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ ವಿಶೇಷ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ದೆಹಲಿಯ ಗಡಿ ಭಾಗಗಳಲ್ಲಿ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದ್ದು, ೧೪೪ ಸೆಕ್ಷನ್ ಜಾರಿ ಮಾಡಲಾಗಿದೆ. ಕಂಡಲ್ಲಿ ಗುಂಡು ಆದೇಶಿಸಲಾಗಿದೆ. ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಚೆಕ್ ಪೋಸ್ಟ್ಗಳಲ್ಲಿ ರಾತ್ರಿಯೂ ಕೂಡ ತಪಾಸಣೆ ಕಾರ್ಯಾ ನಡೆದಿದ್ದು ನೋಯ್ಡಾದಿಂದ ದೆಹಲಿಗೆ ಮತ್ತು ದೆಹಲಿಯಿಂದ ನೋಯ್ಡಾಕ್ಕೆ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ.


from India & World News in Kannada | VK Polls https://ift.tt/2waHX3N

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...