ಬೆಂಗಳೂರು: ಜಾಗತಿಕ ಷೇರು ಮಾರುಕಟ್ಟೆಯ ಮೇಲೆ ಕರಾಳ ಪ್ರಭಾವ ಬೀರಿದೆ. ಇದರಿಂದ ಮುಂಬೈ ಷೇರು ಮಾರುಕಟ್ಟೆಗೂ ಹೊಡೆತ ಬಿದ್ದಿದ್ದು, ಷೇರುಗಳ ಮೌಲ್ಯದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ದಿನದ ಆರಂಭಿಕ ವಹಿವಾಟಿನಿಂದಲೇ ಷೇರು ಸೂಚ್ಯಂಕದಲ್ಲಿ ಭಾರೀ ಕುಸಿತ ದಾಖಲಾಗಿದೆ. ಆರಂಭಿಕ ವಹಿವಾಟಿನಲ್ಲಿಯೇ 1,155 ಅಂಕ ಕುಸಿತ ಕಂಡಿದ್ದು, ನಿಫ್ಟಿಯು ಕೂಡ 346 ಅಂಕ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಷೇರುಗಳ ಮೌಲ್ಯದಲ್ಲಿ ಭಾರೀ ಇಳಿಕೆ ಕಂಡಿದೆ. ಇದರಿಂದ ಕೇವಲ 5 ನಿಮಿಷದಲ್ಲಿ 4 ಲಕ್ಷ ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಷೇರು ಕುಸಿತದಿಂದ ರೂಪಾಯಿ ಮೌಲ್ಯದಲ್ಲೂ ಕೂಡ ಇಳಿಕೆ ಕಂಡುಬಂದಿದೆ. 33 ಪೈಸೆ ಇಳಿಕೆ ಕಂಡಿರುವ ರೂಪಾಯಿ ಮೌಲ್ಯ ಸದ್ಯಕ್ಕೆ ಅಮೆರಿಕ ಡಾಲರ್ ಎದುರು 71.94 ರೂ. ಇದೆ. ಷೇರು ಕುಸಿತ ಬ್ಯಾಂಕಿಂಗ್, ಆಟೋಮೊಬೈಲ್, ಲೋಹ, ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಕರಾತ್ಮಕ ಪ್ರಭಾವ ಬೀರಿದ್ದು, ಕಂಪನಿಗಳ ಷೇರು ಮೌಲ್ಯದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ಷೇರು ಹೂಡಿಕೆದಾರರು ಹಾಗೂ ಕಂಪನಿಗಳು ಭಾರಿ ಪ್ರಮಾಣದ ನಷ್ಟ ಅನುಭವಿಸಿವೆ. ಷೇರುಪೇಟೆ ಕುಸಿತ ಹಿನ್ನೆಲೆ ರಿಲಾಯನ್ಸ್ ಇಂಡಸ್ಟ್ರೀಸ್, ಹೆಚ್‌ಡಿಎಫ್‌ಸಿ, ಇನ್ಫೋಸಿಸ್ ಷೇರು ಬೆಲೆಯಲ್ಲೂ ಇಳಿಕೆ ಕಂಡಿದೆ. ಇನ್ನು, ಕಚ್ಚಾತೈಲ ಬೆಲೆಯೂ ಶೇ.2.2ರಷ್ಟು ಕುಸಿತ ದಾಖಲಿಸಿದ್ದು, ಒಂದು ಬ್ಯಾರಲ್ ಕಚ್ಚಾತೈಲದ ಬೆಲೆ 51 ಡಾಲರ್ ಇದೆ.
from India & World News in Kannada | VK Polls https://ift.tt/39a4pZM