'ಯಡಿಯೂರಪ್ಪಗೆ 75 ವರ್ಷ ಆಯ್ತು, ಹೆಚ್ಚು ದಿನ ಸಿಎಂ ಆಗಿ ಇರಲ್ಲ': ಡಿಕೆ ಸುರೇಶ್ ಭವಿಷ್ಯ

ಬೆಂಗಳೂರು: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಅಧಿಕಾರದಲ್ಲಿಇರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್‌ ಭವಿಷ್ಯ ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರದ ಹೆನ್ನಾಗರ ಗ್ರಾಮ ಪಂಚಾಯಿತಿಯ ಕಾಚನಾಯಕನಹಳ್ಳಿ ಹಾಗೂ ಯಾರಂಡಹಳ್ಳಿಯಲ್ಲಿ ಕೇಂದ್ರ ಸರ್ಕಾರದ ರೂರ್ಬನ್‌ ಯೋಜನೆಯಡಿ ನೆಲಮಟ್ಟದ ನೀರಿನ ಸಂಗ್ರಹಗಾರಗಳು ಹಾಗೂ ಹಲವು ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರು ಯಾವುದೇ ಅಧಿಕಾರ ವಹಿಸಿಕೊಳ್ಳುವಂತೆ ಇಲ್ಲ. ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ ಇನ್ನೂ ಹಲವು ಹಿರಿಯ ನಾಯಕರನ್ನೇ ಮೂಲೆ ಗುಂಪು ಮಾಡಲಾಗಿದೆ. ಅದೇ ರೀತಿ ಯಡಿಯೂರಪ್ಪನವರನ್ನು ಫೆಬ್ರವರಿ ನಂತರ ಸಿಎಂ ಹುದ್ದೆಯಿಂದ ಕೆಳಗಿಳಿಸಬಹುದು’ ಎಂದು ಅಭಿಪ್ರಾಯಪಟ್ಟರು. ‘ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಚುನಾವಣೆಯ ನಂತರ ಎಲ್ಲ ಪಕ್ಷದವರು ಅಭಿವೃದ್ಧಿಗೆ ಕೈ ಜೋಡಿಸಬೇಕು. ಸ್ಥಳೀಯ ಶಾಸಕ ಎಂ. ಕೃಷ್ಣಪ್ಪ ಈ ಬಗ್ಗೆ ಆರಿತು ಕೆಲಸ ಮಾಡಬೇಕು’ ಎಂದು ಇದೇ ವೇಳೆ ಡಿಕೆ ಸುರೇಶ್ ಅಭಿಪ್ರಾಯಪಟ್ಟರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ರೆಡ್ಡಿ, ವಿಧಾನ ಪರಿಷತ್‌ ಸದಸ್ಯ ನಾರಾಯಣ ಸ್ವಾಮಿ ಮಾತನಾಡಿದರು. ಬಮೂಲ್‌ ಮಾಜಿ ಅಧ್ಯಕ್ಷ ಆರ್‌.ಕೆ ರಮೇಶ್‌ ಮತ್ತಿತರರು ಹಾಜರಿದ್ದರು.


from India & World News in Kannada | VK Polls https://ift.tt/2wGhn30

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...