ದೆಹಲಿ ಹಿಂಸಾಚಾರ, ಅಮಿತ್ ಶಾ ರಾಜೀನಾಮೆಗೆ ಸೋನಿಯಾ ಗಾಂಧಿ ಒತ್ತಾಯ

ಹೊಸದಿಲ್ಲಿ: ತಡೆಯಲು ವಿಫಲರಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಒತ್ತಾಯಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸೋನಿಯಾ ಗಾಂಧಿ, ದೆಹಲಿಯ ಹಿಂಸಾಚಾರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಇದ್ದರೂ ಗೃಹ ಇಲಾಖೆ ಏಕೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಿಂಸಾಚಾರ ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಕೂಡಾ ವಿಫಲವಾಗಿದೆ ಎಂದು ಅರವಿಂದ್ ಕೇಜ್ರಿವಾಲ್‌ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ಗಲಭೆ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳುವಂತೆ ಆಗ್ರಹಿಸಿದರು. ಗಲಭೆಯಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ ಸೋನಿಯಾ ಗಾಂಧಿ, ಇಷ್ಟೆಲ್ಲಾ ನಡೆಯುತ್ತಿದ್ದರೂ ಕೇಂದ್ರ ಗೃಹ ಸಚಿವರು ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ. ಗಲಭೆ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿದ ಅವರು ಗ್ರಾಮಗಳಲ್ಲಿ ಶಾಂತಿ ಸಮಿತಿಯನ್ನು ರಚನೆ ಮಾಡುವಂತೆ ಆಗ್ರಹಿಸಿದ್ದಾರೆ. ಗುರುವಾರ ಕಾಂಗ್ರೆಸ್‌ನಿಂದ ಪಾದಯಾತ್ರೆ ದೆಹಲಿ ಹಿಂಸಾಚಾರವನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರ ಗಲಭೆ ನಿಯಂತ್ರಣ ಮಾಡಲು ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ಕಾಂಗ್ರೆಸ್ ರಾಷ್ಟ್ರಪತಿ ಭವನದವರೆಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದ್ದು ಘಟನೆಯ ಕುರಿತು ಕಾಂಗ್ರೆಸ್ ರಾಷ್ಟ್ರಪತಿಗೆ ಮನವಿಯನ್ನು ಸಲ್ಲಿಸಲಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವೆ ದೆಹಲಿಯಲ್ಲಿ ಭುಗಿಲೆದ್ದ ಘರ್ಷಣೆ ಹಿಂಸಾಚಾರದ ಸ್ವರೂಪವನ್ನು ಪಡೆದುಕೊಂಡಿದ್ದು ಇದುವರೆಗೂ 20 ಜನರು ಸಾವನ್ನಪ್ಪಿದ್ದಾರೆ. ಗಲಬೆಯಲ್ಲಿ 150 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈಶಾನ್ಯ ದೆಹಲಿಯ ಚಾಂದ್ ಬಾಗ್‌, ಬಾಬರ್‌ ಪುರ್, ಜೋರಿ ಪುರ್‌ಗಳಲ್ಲಿ ಗಲಭೆ ಸಂಪೂರ್ಣ ನಿಯಂತ್ರಣಕ್ಕೆ ಇನ್ನೂ ಬಂದಿಲ್ಲ. ಹಿಂಸಾಚಾರ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೆಚ್ಚುವರಿ ಅರೆಸೇನಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.


from India & World News in Kannada | VK Polls https://ift.tt/3a3EaUK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...