ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಜಮ್ಮು ಕಾಶ್ಮೀರದ ಜಿಲ್ಲೆಯ ಸಂಗಮ್ ಎಂಬಲ್ಲಿ ಶನಿವಾರ ಬೆಳಗಿನ ಉಗ್ರರು ಸೇನಾ ಪಡೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದರು. ಸಂಗಮ್ ಬಳಿಯ ಬಿಜ್‌ಬಿಹಾರ ಎಂಬಲ್ಲಿ ಈ ಘಟನೆ ನಡೆದಿದೆ. ಉಗ್ರ ಸಂಘಟನೆಯವರು ಗುಂಡಿನ ದಾಳಿ ನಡೆಸಿದರು ಎಂದು ಸೇನಾ ಮೂಲಗಳು ತಿಳಿಸಿವೆ. ಕೂಡಲೇ ಭಾರತೀಯ ಯೋಧರು ಪ್ರತ್ಯುತ್ತರ ನೀಡಿದರು. ಈ ಸಂದರ್ಭದಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಅರ್ಧಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಡೆಯಿತು. ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಿಆರ್‌ಪಿಎಫ್ ಮತ್ತು ಸೇನಾ ಯೋಧರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು. ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
from India & World News in Kannada | VK Polls https://ift.tt/2va64Qb