ಕೆಲವೇ ಗಂಟೆಗಳಲ್ಲಿ ಎಲ್ಲರನ್ನು ಭೇಟಿಯಾಗುತ್ತೇನೆ, ಹಿಂದಿಯಲ್ಲಿ ಟ್ವೀಟ್‌ ಮಾಡಿದ ಟ್ರಂಪ್

ಹೊಸದೆಹಲಿ: ನಾವು ಭಾರತಕ್ಕೆ ಬರುವ ದಾರಿಯಲ್ಲಿದ್ದೇವೆ. ಇನ್ನು ಕೆಲವೇ ಗಂಟೆಯಲ್ಲಿ ಎಲ್ಲರನ್ನು ಭೇಟಿಯಾಗುತ್ತೇವೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. ಟ್ರಂಪ್ ಟ್ವೀಟ್‌ಗೆ ಉತ್ತರ ನೀಡಿರುವ 'ಅತಿಥಿ ದೇವೋಭವ' ಎಂದಿದ್ದಾರೆ. ಇದಕ್ಕೂ ಮುನ್ನ ಟ್ವೀಟ್‌ ಮಾಡಿದ್ದ ಟ್ರಂಪ್, ಪತ್ನಿ ಮೆಲನಿಯಾ ಜೊತೆಗೆ ಭಾರತಕ್ಕೆ ಹೊರಡುತ್ತಿದ್ದೇನೆ ಎಂದಿದ್ದರು. ಈ ಟ್ವೀಟ್‌ನ್ನು ರಿಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಿಮ್ಮ ಭೇಟಿ ಖಂಡಿತವಾಗಿಯೂ ಎರಡು ರಾಷ್ಟ್ರಗಳ ನಡುವಿನ ಸ್ನೇಹವನ್ನು ಮತ್ತಷ್ಟು ಬಲಪಡಿಸುತ್ತದೆ. ಅಹಮದಾಬಾದ್‌ನಲ್ಲಿ ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುವೆ” ಎಂದು ಸ್ವಾಗತ ಕೋರಿದ್ದರು. ಅಮೆರಿಕಾದ ಅಧ್ಯಕ್ಷರ ಹಿಂದಿ ಟ್ವೀಟ್‌ ವೈರಲ್‌ ಆಗುತ್ತಿದ್ದು ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಭಾರತಕ್ಕೆ ಆಗಮಿಸಲಿದ್ದಾರೆ. ಅಹಮದಾಬಾದ್‌ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಅವರಿಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಶಿಷ್ಟಾಚಾರಬದಿಗೊತ್ತಿ ಬಂದು ಸ್ವಾಗತಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಟ್ರಂಪ್ ಹಾಗೂ ಮೋದಿ ಮೊಟೆರಾ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಟ್ರಂಪ್‌ ಸ್ವಾಗತಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿದ್ದು, ಮೊಟೆರಾ ಕ್ರೀಡಾಂಗಣದಲ್ಲಿ ಸಾವಿರಾರು ಜನರು ಸೇರಿದ್ದಾರೆ. ಟ್ರಂಪ್ ಆಗಮನದ ಹಿನ್ನೆಲೆಯಲ್ಲಿ ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ. ಅಹಮದಾಬಾದ್‌ ನಗರದಲ್ಲಿ ಖಾಕಿ ಕೋಟೆಯನ್ನೇ ಸೃಷ್ಟಿ ಮಾಡಲಾಗಿದೆ.


from India & World News in Kannada | VK Polls https://ift.tt/3a2kBfI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...