ಶಾಂತ ಸ್ಥಿತಿಯತ್ತ ದೆಹಲಿ; ಮುಂದುವರಿದ ಪೊಲೀಸ್ ಬಂದೋಬಸ್ತ್

ಹೊಸದಿಲ್ಲಿ: ಪೌರತ್ವ ಗಲಭೆಯಿಂದ ಹೊತ್ತಿಉರಿದ ಸದ್ಯ ಶಾಂತ ಸ್ಥಿತಿಗೆ ಮರಳುತ್ತಿದೆ. ಈಶಾನ್ಯ ದೆಹಲಿಯ ಜಾಫ್ರಾಬಾದ್, ಭಜನ್‌ಪುರ್‌, ಮೌಜ್ ಪುರ್, ಚಾಂದ್ ಬಾಗ್, ಖುರೇಜಿ ಖಾಸ್ ಪ್ರದೇಶಗಳಲ್ಲಿ ಶಾಂತಿ ನೆಲೆಸಿದ್ದು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಭದ್ರತೆಯನ್ನು ಮುಂದುವರಿಸಲಾಗಿದೆ. ಪೌರತ್ವ ಕಾಯ್ದೆ ಪರ-ವಿರೋಧಿ ಗುಂಪುಗಳ ನಡುವಿನ ಹಿಂಸಾಚಾರ ಮತೀಯ ಸ್ವರೂಪ ಪಡೆದುಕೊಂಡು ಅಪಾರ ಪ್ರಮಾಣದ ಸಾವು ನೋವಿಗೆ ಕಾರಣವಾಗಿದೆ. ಇದುವರೆಗೆ ದೆಹಲಿಯಲ್ಲಿ 42 ಜನರು ಸಾವನ್ನಪ್ಪಿದ್ದಾರೆ. 150 ಕ್ಕೂ ಆಧಿಕ ಜನರು ಗಾಯಗೊಂಡಿದ್ದಾರೆ. ಸಾವು ನೋವುಗಳ ನಡುವೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ದುಷ್ಕರ್ಮಿಗಳ ದಾಳಿಗೆ ಅಂಗಡಿ ಮುಗ್ಗಟ್ಟುಗಳು ಮನೆಗಳು ಸುಟ್ಟು ಭಸ್ಮವಾಗಿದೆ. ಹಾನಿಯಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ದೆಹಲಿ ಸರ್ಕಾರ ತೊಡಗಿಕೊಂಡಿದ್ದು ಮೃತಪಟ್ಟವರಿಗೂ ಪರಿಹಾರವನ್ನು ಘೋಷಣೆ ಮಾಡಿದೆ. ಸದ್ಯ ಗಲಭೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ನೆಲೆಸಿದ್ದು ಯಾವುದೇ ಅಹಿತಕರ ಘಟನೆ ನಡೆದಿರುವುದು ವರದಿಯಾಗಿಲ್ಲ. ಹೀಗಿದ್ದರೂ ಮುಂಜಾಗರೂಕತಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಮುಂದುವರಿಸಲಾಗಿದೆ. ಅರೆಸೇನಾ ಪಡೆ ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆಗಳನ್ನು ಗಲಭೆ ನಡೆದ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಪೌರತ್ವ ಕಾಯ್ದೆ ವಿರೋಧಿಸಿ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಅಲ್ಲಿಯೂ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್‌ ಜಂಟಿ ಆಯುಕ್ತ ಡಿಸಿ ಶ್ರಿವಾಸ್ತವ್ ತಿಳಿಸಿದ್ದಾರೆ. ದೆಹಲಿ ಗಲಭೆ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ವೇದಿಕೆಯಾಗಿದ್ದು ಕಾಂಗ್ರೆಸ್ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದೆ. ಆಮ್ ಆದ್ಮಿ ಪಕ್ಷ ಗಲಭೆಗೆ ಹೊಣೆಯನ್ನು ಬಿಜೆಪಿ ಮೇಲೆ ಹೊರಿಸಿದರೆ ಹಿಂಸಾಚಾರಕ್ಕೆ ಆಮ್ ಆದ್ಮಿ ಪಕ್ಷ ಕಾರಣ ಎಂದು ಬಿಜೆಪಿ ಆರೋಪಿಸಿದೆ.


from India & World News in Kannada | VK Polls https://ift.tt/2I9XG6c

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...