ಬಿಜೆಪಿ ಆಡಳಿತದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಸುರಕ್ಷಿತವಾಗಿಲ್ಲ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿಲ್ಲ. ಸಂವಿಧಾನದ ಮೂಲ ಆಶಯವಾದ ಜಾತ್ಯತೀತ ಸಿದ್ಧಾಂತಕ್ಕೆ ವಿರುದ್ಧವಾಗಿ ಹಿಂದೂ ರಾಷ್ಟ್ರ ನಿರ್ಮಾಣ ಮಾಡಲು ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಸಂವಿಧಾನ ಹಾಗೂ ಪೌರತ್ವ ಕಾಯಿದೆ ಕುರಿತು ಬೆಂಗಳೂರಿನಲ್ಲಿ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, “ಬಿಜೆಪಿಯವರು ಸಮಾಜದಲ್ಲಿ ಧರ್ಮ ಸಂಘರ್ಷ ಉಂಟು ಮಾಡಿ, ಮತ ಧ್ರುವೀಕರಣ ಮಾಡಲು ಹೊರಟಿದ್ದಾರೆ. ದೇಶದ ಅಧಿಕಾರ ಕ್ರೂರಿಗಳ ಕೈಯಲ್ಲಿದ್ದು ಜನಾಭಿಪ್ರಾಯಕ್ಕೆ ಬೆಲೆ ಇಲ್ಲದಂತಾಗಿದೆ” ಎಂದರು. ದೆಹಲಿಯಲ್ಲಿ ಹಿಂಸಾಚಾರ ನಡೆದು 35 ಮಂದಿ ಬಲಿಯಾಗಿದ್ದಾರೆ, ಹಿಂಸೆಗೆ ಪ್ರಚೋದನೆ ನೀಡಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಮೇಲೆ ಇದುವರೆಗೂ ಪ್ರಕರಣ ದಾಖಲಾಗಿಲ್ಲ. ಇದನ್ನು ಪ್ರಶ್ನಿಸಿದ ಹೈಕೋರ್ಟ್ ನ್ಯಾಯಾಧೀಶರನ್ನೇ ವರ್ಗಾವಣೆ ಮಾಡಲಾಗಿದೆ ಎಂದು ಕಿಡಿಕಾರಿದರು. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿಲ್ಲ. ಸಂವಿಧಾನದ ಮೂಲ ಆಶಯವಾದ ಜಾತ್ಯತೀತ ಸಿದ್ಧಾಂತಕ್ಕೆ ವಿರುದ್ಧವಾಗಿ ಹಿಂದೂ ರಾಷ್ಟ್ರ ನಿರ್ಮಾಣ ಮಾಡಲು ವ್ಯವಸ್ಥಿತ ಸಂಚು ನಡೆಯುತ್ತಿದೆ. ಬಿಜೆಪಿಯವರು ಸಮಾಜದಲ್ಲಿ ಧರ್ಮ ಸಂಘರ್ಷ ಉಂಟು ಮಾಡಿ, ಮತ ಧ್ರುವೀಕರಣ ಮಾಡಲು ಹೊರಟಿದ್ದಾರೆ. ಅಸ್ಸಾಂನಲ್ಲಿರುವ 3.5 ಕೋಟಿ ಜನಸಂಖ್ಯೆಗೆ ಎನ್‌ಆರ್‌ಸಿ ಜಾರಿ ಮಾಡಲು ರೂ.1600 ಕೋಟಿ ಖರ್ಚಾಗಿದೆ. ಇನ್ನು ಇದನ್ನು ದೇಶಾದ್ಯಂತ ಜಾರಿ ಮಾಡಲು ಹೊರಟರೆ ಕನಿಷ್ಠ ರೂ.1 ಲಕ್ಷ ಕೋಟಿ ಹಣ ಬೇಕಾಗುತ್ತದೆ. ದೇಶ ಆರ್ಥಿಕವಾಗಿ ದಿವಾಳಿ ಹಂತ ತಲುಪಿರುವ ಈ ಸನ್ನಿವೇಶದಲ್ಲಿ ಸಿಎಎ, ಎನ್‌ಆರ್‌ಸಿ ಜಾರಿಯ ಅಗತ್ಯವೇನಿದೆ? ಎಂದು ಪ್ರಶ್ನಿಸಿದರು. ಬಿಜೆಪಿ ಪಕ್ಷ ಅಧಿಕಾರದಲ್ಲಿರುವ ಬಿಹಾರದಲ್ಲಿಯೇ ಎನ್‌ಆರ್‌ಸಿ ಜಾರಿ ಮಾಡುವುದಿಲ್ಲ ಎಂದು ನಿರ್ಧಾರ ಕೈಗೊಂಡಿದ್ದಾರೆ. ಆದರೂ ಇದನ್ನು ದೇಶಾದ್ಯಂತ ಜಾರಿ ಮಾಡಲು ಹೊರಟಿದ್ದಾರಲ್ಲ ಇವರ ಹುಂಬತನಕ್ಕೆ ಏನು ಹೇಳಬೇಕು? ಮೋದಿ-ಶಾ ಎಂಬ ವಿನಾಶಕಾರಿ ಶಕ್ತಿಗಳನ್ನು ಅಧಿಕಾರಮುಕ್ತವಾಗಿಸದಿದ್ದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಉಳಿಗಾಲವಿಲ್ಲ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದಿಕೊಂಡರು.


from India & World News in Kannada | VK Polls https://ift.tt/3956ar4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...