ಸಿದ್ದಗಂಗಾ ಮಠಕ್ಕೆ ಸರ್ಕಾರದಿಂದ ಅಕ್ಕಿ, ಗೋಧಿ ಪೂರೈಕೆ ರದ್ದು! ಚರ್ಚೆಗೆ ಗ್ರಾಸವಾದ ಯು.ಟಿ ಖಾದರ್ ಆರೋಪ

ಬೆಂಗಳೂರು: ಸಿದ್ದಗಂಗಾ ಮಠಕ್ಕೆ ರಾಜ್ಯ ಸರಕಾರದಿಂದ ಅಕ್ಕಿ ಹಾಗೂ ಗೋಧಿ ಪೂರೈಕೆಯನ್ನು ರದ್ದು ಮಾಡಲಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಮಾಡಿರುವ ಆರೋಪ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಮೂರು ತಿಂಗಳಿಂದ ಸೇರಿದಂತೆ ಹಲವಾರು ಸಂಘಸಂಸ್ಥೆಗಳಿಗೆ ಅಕ್ಕಿ ಹಾಗೂ ಗೋಧಿ ಪೂರೈಕೆ ರದ್ದು ಮಾಡಲಾಗಿದೆ ಎಂದು ಖಾದರ್ ಆರೋಪಿಸಿದ್ದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖಾದರ್ ಈ ಕುರಿತಾಗಿ ಗಂಭೀರವಾದ ಆರೋಪ ಮಾಡಿದ್ದಲ್ಲದೆ,ಅನ್ನದಾಸೋಹ ಕಾರ್ಯಕ್ರಮ ರದ್ಧು ವಾಪಸ್ ಪಡೆಯಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದರು. ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಆಹಾರ ಸಚಿವೆ ಶಶಿಕಲಾ ಜೊಲ್ಲೆ, ಯು.ಟಿ ಖಾದರ್ ಆರೋಪವನ್ನು ನಿರಾಕರಿಸಿದ್ದಾರೆ. ಸರಕಾರ 464 ಸಂಸ್ಥೆಗಳಿಗೆ ಅಕ್ಕಿ, ಗೋದಿ ಪೂರೈಕೆ ಮಾಡುತ್ತಿವೆ, ಬಿಜೆಪಿ ಸರ್ಕಾರದ ಬಂದ ಬಳಿಕ ಅಕ್ಕಿ, ಗೋದಿ ಪೂರೈಕೆ ನಿಂತಿವೆ ಎಂಬ ಆರೋಪ ಸುಳ್ಳು. ಅಕ್ಕಿ, ಗೋಧಿ ಪೂರೈಕೆಯನ್ನು ಬಿಜೆಪಿ ಸರಕಾರ ಬಂದ ಬಳಿಕ ಸ್ಥಗಿತಗೊಳಿಸಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲೇ ಅಕ್ಕಿ, ಗೋಧಿ ಪೂರೈಕೆ ನಿಲ್ಲಿಸಲಾಗಿತ್ತು. ವಾರ್ಷಿಕವಾಗಿ ಅಕ್ಕಿ, ಗೋಧಿ ಪೂರೈಕೆಗೆ 12.50 ಕೋಟಿ ರೂಪಾಯಿ ವೆಚ್ಚ ತಗುಲುತ್ತದೆ. ವಿವಿಧ ಮಠಗಳು, ಮತ್ತು ಸಂಘ ಸಂಸ್ಥೆಗಳು ಮನವಿ ಮೇರೆಗೆ ಅಕ್ಕಿ ಗೋಧಿ ಕೊಡಲು ಮುಂದಾಗುತ್ತೇವೆ. ಸಿಎಂ ಜೊತೆ ಚರ್ಚೆ ನಡೆಸಿ ಆಹಾರ ಧಾನ್ಯಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಮಠಗಳು, ಸಂಘ ಸಂಸ್ಥೆಗಳಿಗೆ ಅನ್ಯಾಯ ಆಗದಂತೆ ನೋಡಿಕೊಳ್ತೇವೆ ಎಂದರು.


from India & World News in Kannada | VK Polls https://ift.tt/31zvsL7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...