ಸಾ.ರಾ. ಮಹೇಶ್‌, ತನ್ವೀರ್‌ ಸೇಠ್‌ಗಿತ್ತು ರವಿ ಪೂಜಾರಿ ಬೆದರಿಕೆ!

ಮೈಸೂರು: ಭೂಗತ ಡಾನ್‌ ತಮಗೆ ಹಾಗೂ ಶಾಸಕ ಸಾ.ರಾ. ಮಹೇಶ್‌ ಅವರಲ್ಲದೇ ಇನ್ನೂ ಅನೇಕ ಶಾಸಕರಿಗೆ ಬೆದರಿಕೆ ಇತ್ತು. ಯಾವ ಶಾಸಕರಿಗೆ ಬೆದರಿಕೆ ಇತ್ತು ಎಂಬುದು ತನಿಖೆಯಿಂದ ಬಯಲಾಗಬೇಕಿದೆ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ದುಬೈನಲ್ಲಿ ಚಿಕಿತ್ಸೆ ಪಡೆದು ಸೋಮವಾರ ಮಾಸೂರಿಗೆ ವಾಪಾಸಾದ ತನ್ವೀರ್‌ ಸೇಠ್‌ ಸುದ್ದಿಗಾರರ ಜತೆ ಮಾತನಾಡಿ, ''ನಾನು ಹಾಗೂ ಸಾ.ರಾ. ಮಹೇಶ್‌ ಪೊಲೀಸರಿಗೆ ದೂರು ನೀಡಿದ್ದೆವು. ಇನ್ನು ಯಾವ ಶಾಸಕರಿಗೆ ರವಿ ಪೂಜಾರಿಯಿಂದ ಬೆದರಿಕೆ ಇತ್ತು ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ,'' ಎಂದರು. ''ನಾನು ಈಗ ಆರೋಗ್ಯವಾಗಿದ್ದೇನೆ. ಧ್ವನಿ ಪೆಟ್ಟಿಗೆ ಹಂತಹಂತವಾಗಿ ಸರಿಯಾಗುತ್ತಿದೆ. ಧ್ವನಿ ಸರಿಯಾಗಲು ಥೆರಪಿ ನಡೆಯುತ್ತಿದೆ. ಇನ್ನು ಮುಂದೆ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೇನೆ. ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇನೆ,'' ಎಂದರು. ಮೈಸೂರಿನಲ್ಲಿ ಕೆಲವು ತಿಂಗಳ ಹಿಂದೆ ತನ್ವೀರ್‌ ಸೇಠ್‌ ಅವರ ಕೊಲೆ ಯತ್ನ ನಡೆದು ಅವರು ತೀವ್ರವಾಗಿ ಗಾಯಗೊಂಡಿದ್ದರು. ಇಲ್ಲಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.


from India & World News in Kannada | VK Polls https://ift.tt/3a6eJC5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...