ರಾಷ್ಟ್ರಮಟ್ಟದಲ್ಲಿ ಎನ್‌ಆರ್‌ಸಿ ಜಾರಿ ಇಲ್ಲ, ಸಂಸತ್‌ಗೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ

ಹೊಸದಿಲ್ಲಿ: ರಾಷ್ಟ್ರಮಟ್ಟದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಜಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಇದುವರೆಗೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಸಂಸತ್‌ಗೆ ಕೇಂದ್ರ ಸಚಿವಾಲಯ ಸ್ಪಷ್ಟಪಡಿಸಿದೆ. ಸಿಎಎ ಜೊತೆಗೆ ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ತರಲಾಗುವುದು ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರದ ಜಾರಿ ಇಲ್ಲ ಎಂದಿದೆ. ಎನ್‌ಆರ್‌ಸಿ ಜಾರಿಯ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಿದ್ದರು. ಸಂಸತ್ ಅಧಿವೇಶನದ ಸಂದರ್ಭದಲ್ಲಿ ಶಾ ಎನ್‌ಆರ್‌ಸಿ ದೇಶದಾದ್ಯಂತ ಜಾರಿಗೊಳಿಸುತ್ತೇವೆ ಎಂದಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಸಮಾವೇಶವೊಂದಲ್ಲಿ ಮಾತನಾಡುತ್ತಾ ಇದನ್ನು ನಿರಾಕರಿಸಿದ್ದರು. ಈ ನಡುವೆ ವಿವಾದಿತ 2019 ಹಾಗೂ ಎನ್‌ಆರ್‌ಸಿ, ಎನ್‌ಪಿಆರ್‌ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ದೆಹಲಿಯ ಶಾಹಿನ್‌ ಭಾಗ್‌ನಲ್ಲಿ ಮಹಿಳೆಯರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತ್ತಿದೆ. ಸಂಸತ್‌ ಅಧಿವೇಶನದಲ್ಲೂ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಇದರ ಬೆನ್ನಲ್ಲೇ ಲೋಕಸಭೆಯಲ್ಲಿ ಎನ್‌ಆರ್‌ಸಿ ಜಾರಿಯ ಕುರಿತಾಗಿ ಕೇಳಿರುವ ಪ್ರಶ್ನೆಯೊಂದಕ್ಕೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಲಿಖಿತ ರೂಪದಲ್ಲಿ ಉತ್ತರಿಸಿ, ಎನ್‌ಆರ್‌ಸಿ ರಾಷ್ಟ್ರೀಯ ಮಟ್ಟದಲ್ಲಿ ಜಾರಿಗೆ ತರವ ನಿರ್ಧಾರವನ್ನು ಇದುವರೆಗೂ ಕೇಂದ್ರ ಸರಕಾರ ಮಾಡಿಲ್ಲ ಎಂದಿದ್ದಾರೆ.


from India & World News in Kannada | VK Polls https://ift.tt/2RUY3XN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...