ಜಾಮಿಯಾದಲ್ಲಿ ಮತ್ತೆ ಗುಂಡಿನ ದಾಳಿ, ಆತಂಕದಲ್ಲಿ ದೆಹಲಿ

ಹೊಸದಿಲ್ಲಿ: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಜಾಮಿಯಾ ವಿವಿ ಆವರಣದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ. ಕೆಂಪು ಬಣ್ಣದ ಸ್ಕೂಟಿಯಲ್ಲಿ ಬಂದ ದಾಳಿಕೋರರು ಜಾಮಿಯಾದ ಗೇಟ್‌ ನಂಬರ್ 7 ರಲ್ಲಿ ಭಾನುವಾರ ಮಧ್ಯರಾತ್ರಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದೆಹಲಿಯಲ್ಲಿ ಸಿಎಎ ವಿರುದ್ಧ ಪ್ರತಿಭಟಿಸುವವರ ಮೇಲೆ ನಡೆದ ಮೂರನೇ ಗುಂಡಿನ ದಾಳಿ ಇದಾಗಿದೆ. ಓಖ್ಲಾ ಸ್ಕೂಟಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಆದರೆ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು( ಜನವರಿ 30) ಜಾಮಿಯಾ ವಿದ್ಯಾರ್ಥಿಗಳ ಮೆರವಣಿಗೆಯ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಗೋಪಾಲ್‌ ಎಂಬಾತ ಪೊಲೀಸರ ಸಮ್ಮುಖದಲ್ಲೇ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದ. ಇದಾದ ಬಳಿಕ ದೆಹಲಿಯ ಶಾಹಿನ್ ಬಾಗ್‌ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿತ್ತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದ ಆದರೆ ಯಾರು ಗಾಯಗೊಂಡಿರಲಿಲ್ಲ. ಬಳಿಕ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಮೂರನೇ ದಾಳಿ ನಡೆದಿದ್ದು ದೆಹಲಿಯ ಜನರಲ್ಲಿ ಆತಂಕ ಮೂಡಿಸಿದೆ. ಪದೇ ಪದೇ ಘಟನೆ ನಡೆಯುತ್ತಿರುವುದರಿಂದ ದೆಹಲಿಯ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.


from India & World News in Kannada | VK Polls https://ift.tt/3b2nxKq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...