ಮಹದಾಯಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಚಿವರ ಭೇಟಿಗೆ ರಮೇಶ್ ಜಾರಕಿಹೊಳಿ ನಿರ್ಧಾರ

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಮಂಡಳಿ ನೀಡಿರುವ ತೀರ್ಪಿನ ಆದೇಶ ಹೊರಡಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ಸಚಿವ ನಿರ್ಧರಿಸಿದ್ದಾರೆ. ಬುಧವಾರ( ಫೆ. 26) ರಂದು ಬೆಳಿಗ್ಗೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ಆದಷ್ಟು ಶೀಘ್ರವಾಗಿ ಮಹದಾಯಿ ನ್ಯಾಯಮಂಡಳಿಯ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಬುಧವಾರ ಸಂಜೆ ನೀರು ಹಂಚಿಕೆ ವಿವಾದಗಳಿಗೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಕಾನೂನು ತಜ್ಞರು, ನಿರಾವರಿ ಇಲಾಖೆಯ ತಾಂತ್ರಿಕ ಅಧಿಕಾರಿಗಳ ಜೊತೆಗೆ ಸಭೆ ನಡೆಯಲಿದೆ. 2018 ರಲ್ಲಿ ಮಹದಾಯಿ ನ್ಯಾಯ ಮಂಡಳಿ ತೀರ್ಪು ನೀಡಿದ್ದರೂ, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೇ ಇದ್ದುದರಿಂದ ಯೋಜನೆ ವಿಳಂಬವಾಗಿದೆ. ಆದರೆ, ಫೆಬ್ರವರಿ 20 ರಂದು ಸುಪ್ರೀಂ ಕೋರ್ಟ್ ಗೆಜೆಟ್ ನೊಟಿಫಿಕೇಶನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ಕೋರಲು ಗೋವಾ ಸರ್ಕಾರ ಸಿದ್ದತೆ ಮಾಡಿಕೊಳ್ಳುತ್ತಿರುವುದರಿಂದ ಆದಷ್ಟು ಬೇಗ ಗೆಜೆಟ್ ನೊಟಿಫಿಕೇಶನ್ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಸಚಿವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಸರ್ವ ಪಕ್ಷಗಳ ನಿಯೋಗಕ್ಕೆ ಚಿಂತನೆ ಮಹದಾಯಿ ಆದೇಶವನ್ನು ಗೆಜೆಟ್ ನೊಟಿಫಿಕೇಶ್ ಹೊರಡಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸರ್ವ ಪಕ್ಷಗಳ ನಿಯೋಗ ಕರೆದುಕೊಂಡು ಹೋಗುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿ ನಂತರ ನಿರ್ಧಾರ ಕೈಗೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.


from India & World News in Kannada | VK Polls https://ift.tt/38Wdu8p

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...