ದಾದಾ ದಾಖಲೆ ಮುರಿದು ಧೋನಿ ಬೆನ್ನಟ್ಟಿದ ಕ್ಯಾಪ್ಟನ್ ಕೊಹ್ಲಿ

ಹ್ಯಾಮಿಲ್ಟನ್: ಭಾರತ ಕ್ರಿಕೆಟ್ ತಂಡದ ನಾಯಕ ಮಗದೊಂದು ಸ್ಮರಣೀಯ ದಾಖಲೆ ಬರೆದಿದ್ದಾರೆ. ಹ್ಯಾಮಿಲ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಸಾಧನೆ ಮಾಡಿದ್ದರು. ಈ ಮೂಲಕ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ನಾಯಕರುಗಳ ಪಟ್ಟಿಯಲ್ಲಿ ಮಾಜಿ ಕಪ್ತಾನ ದಾಖಲೆಯನ್ನು ಮುರಿದಿದ್ದಾರೆ. 63 ಎಸೆತಗಳನ್ನು ಎದುರಿಸಿದ ಕಿಂಗ್ ಕೊಹ್ಲಿ ಆರು ಬೌಂಡರಿಗಳಿಂದ 51 ರನ್ ಗಳಿಸಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕರಾಗಿ ಸೌರವ್ ಗಂಗೂಲಿ 142 ಇನ್ನಿಂಗ್ಸ್‌ಗಳಲ್ಲಿ 5082 ರನ್ ಗಳಿಸಿದ್ದರು. ಇದೀಗ ದಾದಾ ಹಿಂದಿಕ್ಕಿರುವ ಕೊಹ್ಲಿ 83 ಇನ್ನಿಂಗ್ಸ್‌ಗಳಲ್ಲೇ 5123 ರನ್ ಪೇರಿಸಿದ್ದಾರೆ. ಅಷ್ಟೇ ಯಾಕೆ ಮಾಜಿ ಯಶಸ್ವಿ ನಾಯಕ ದಾಖಲೆಯನ್ನು ಹಿಂಬಾಲಿಸುತ್ತಿದ್ದಾರೆ. ಒಟ್ಟಾರೆ ಪಟ್ಟಿಯಲ್ಲೀಗ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆ ಮುರಿಯಲು ಇನ್ನು 116 ರನ್‌ಗಳ ಅವಶ್ಯಕತೆಯಿದೆ. ಭಾರತೀಯ ನಾಯಕರಾಗಿ ಏಕದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪೈಕಿ ಅಗ್ರಸ್ಥಾನದಲ್ಲಿರುವ ಮಹೇಂದ್ರ ಸಿಂಗ್ ಧೋನಿ 172 ಇನ್ನಿಂಗ್ಸ್‌ಗಳಲ್ಲಿ ಒಟ್ಟು 6641 ಪೇರಿಸಿದ್ದಾರೆ. ಭಾರತೀಯ ಕಪ್ತಾನರಾಗಿ ಏಕದಿನದಲ್ಲಿ ಅತಿ ಹೆಚ್ಚು ರನ್ ದಾಖಲೆ: ಮಹೇಂದ್ರ ಸಿಂಗ್ ಧೋನಿ 6641 (172 ಇನ್ನಿಂಗ್ಸ್) ಮೊಹಮ್ಮದ್ ಅಜರುದ್ದೀನ್ 5239 (162 ಇನ್ನಿಂಗ್ಸ್) ವಿರಾಟ್ ಕೊಹ್ಲಿ 5123* (83 ಇನ್ನಿಂಗ್ಸ್) ಸೌರವ್ ಗಂಗೂಲಿ 5082 (142 ಇನ್ನಿಂಗ್ಸ್) ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಷ್ಟೇ ಭಾರತೀಯ ನಾಯಕರಾಗಿ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದರು. ಇದೀಗ ಏಕದಿನದಲ್ಲೂ ದಾಖಲೆಯನ್ನು ಮುಂದುವರಿಸಿದ್ದಾರೆ. ಅಲ್ಲದೆ ಏಕದಿನದಲ್ಲಿ 58ನೇ ಅರ್ಧಶತಕದ ಸಾಧನೆ ಮಾಡಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/39cXbUr

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...