'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ, ಅಮೂಲ್ಯ ವಿಚಾರದಲ್ಲಿ ಆತುರ ಬೇಡವೆಂದ ಡಿಕೆಶಿ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿ ಬಂಧನಕ್ಕೊಳಗಾದ ವಿದ್ಯಾರ್ಥಿನಿ ಅಮೂಲ್ಯ ವಿಚಾರದಲ್ಲಿ ಆತುರ ಬೇಡ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, “ಅಮೂಲ್ಯ ಲಿಯೋನ ಅವರ ಪ್ರಕರಣದಲ್ಲಿ ಆಕೆಯ ಪರವಾಗಿ ನಿಲ್ಲುವ ಪ್ರಶ್ನೆಯೇ ಇಲ್ಲ. ರಾಜಕಾರಣವನ್ನು ಒಂದು ಇತಿಮಿತಿಯಲ್ಲಿ ಮಾಡಬೇಕು. ದೇಶದ ವಿಚಾರ ಬಂದಾಗ ನಾವು ದೇಶಕ್ಕೆ ಆದ್ಯತೆ ನೀಡಬೇಕು. ನಮ್ಮ ದೇಶಕ್ಕೆ ಅಪಮಾನ ಮಾಡಿ ಬೇರೆ ದೇಶಕ್ಕೆ ಜೈಕಾರ ಹಾಕುವುದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ನಾನು ಕೂಡ ಅದಕ್ಕೆ ಪ್ರೋತ್ಸಾಹ ನೀಡುವುದಿಲ್ಲ. ಆದರೆ ಆ ಹೆಣ್ಣು ಮಗಳು ಏನು ಹೇಳಲು ಹೋರಟಿದ್ದಳು ಎಂಬುದನ್ನೂ ಕೂಡ ತಿಳಿದುಕೊಳ್ಳಬೇಕು. ಆಕೆ ಈ ಹಿಂದೆ ಒಂದು ಸಿದ್ಧಾಂತದ ವಿಚಾರವಾಗಿ ಮಾತನಾಡಿರುವುದನ್ನು ನೋಡಿದ್ದೇನೆ. ಹೀಗಾಗಿ ಆಕೆ ಏನು ಹೇಳಲು ಹೋರಟಿದ್ದಳು ಎಂಬುದು ನಮಗೆ ಗೊತ್ತಿಲ್ಲ. ಈ ವಿಚಾರದಲ್ಲಿ ಆತುರಪಡುವುದು ಬೇಡ” ಎಂದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಳು. ಅಮೂಕ್ಯ ವರ್ತನೆಗೆ ವೇದಿಕೆಯಲ್ಲೇ ಆಕ್ಷೇಪ ವ್ಯಕ್ತವಾಗಿತ್ತು. ಸದ್ಯ ದೇಶದ್ರೋಹದ ಪ್ರಕರಣದಡಿಯಲ್ಲಿ ಅಮೂಲ್ಯಳನ್ನು ಬಂಧಿಸಲಾಗಿದೆ. ಸಿಎಎ ಜಾರಿ ನಂತರ ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರ ಕೇವಲ ಗೆ ಮಾತ್ರ ಸೀಮಿತವಾಗಿದ್ದಲ್ಲ. ಇದು ದೇಶಕ್ಕೆ ಸಂಬಂಧಿಸಿದ ವಿಚಾರ. ಬಿಜೆಪಿಯವರಿಗೆ ಕಾಂಗ್ರೆಸ್ ಮಾತ್ರ ಕಾಣುತ್ತಿದ್ದು ಹೀಗಾಗಿ ಎಲ್ಲ ವಿಚಾರದಲ್ಲೂ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದೆ ಎಂದು ಮಾಜಿ ಸಚಿವ ತಿಳಿಸಿದ್ದಾರೆ. ಸಿಎಎ ಕುರಿತ ವಿಚಾರವನ್ನು ಕಾಂಗ್ರೆಸ್ ಜನರಿಗೆ ಬಿಟ್ಟಿದೆ. ಇದನ್ನು ವಿರೋಧಿಸುತ್ತಿರುವವರು ತಮ್ಮದೇ ಆದ ರೀತಿಯಲ್ಲಿ ವಿರೋಧ ಮಾಡುತ್ತಿದ್ದಾರೆ. ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಬೇರೆ ಬೇರೆ ರಾಷ್ಟ್ರಗಳೂ ಇದನ್ನು ಗಮನಿಸುತ್ತಿವೆ. ಈ ಕಾಯ್ದೆ ಜಾರಿ ನಂತರ ಆರ್ಥಿಕ ಕಡಿತಕ್ಕೆ ಅನೇಕ ರಾಷ್ಟ್ರಗಳಲ್ಲಿ ಚಿಂತನೆ ನಡೆಯುತ್ತಿದೆ ಅಂತಾ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ ಎಂದರು. ಈ ಸಿಎಎ ಜಾರಿ ನಂತರ ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ನಮ್ಮ ವಿದ್ಯಾವಂತ ಯುವ ಸಮೂಹ ಅಮೆರಿಕ, ಯುರೋಪ್ ನಂತಹ ದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಅವರು ಆ ದೇಶದಲ್ಲಿ ಅಲ್ಪಸಂಖ್ಯಾತರು. ಈ ಕಾಯ್ದೆ ಜಾರಿ ನಂತರ ಅವರನ್ನು ಬೇರೆ ರೀತಿಯಲ್ಲಿ ಕಾಣುತ್ತಿದ್ದಾರೆ ಎಂದು ಹೇಳಿದರು.


from India & World News in Kannada | VK Polls https://ift.tt/2PkDsuu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...