ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿ ಹೋರಾಟಗಳನ್ನು ದೇಶ ವಿರೋಧಿ ಸಂಘಟನೆಗಳು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಕೇಂದ್ರ ಸಚಿವ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಸದಾನಂದ ಗೌಡ, ದೇಶದಲ್ಲಿರವ ಸದಸ್ಯದ ಪರಿಸ್ಥಿತಿಯ ಲಾಭ ಪಡೆಯಲು ಹಲವರು ಪ್ರಯತ್ನ ನಡೆಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ದೇಶದ್ರೋಹಿ ಸಂಘಟನೆಗಳು ಸಿಎಎ ವಿರೋಧಿ ಹೋರಾಟಗಳನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಈ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಸಂದರ್ಭದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಳು. ಈ ಘಟನೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಆರ್ದ್ರಾ ಎಂಬ ವಿದ್ಯಾರ್ಥಿನಿ ಫ್ರೀ ಕಾಶ್ಮೀರ್, ಫ್ರೀ ದಲಿತ್, ಫ್ರೀ ಮುಸ್ಲಿಂ ಎಂಬ ಭಿತ್ತಿಪತ್ರ ಪ್ರದರ್ಶನ ಮಾಡಿದ್ದಳು. ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ಅಮೂಲ್ಯ ನಡೆಗೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದ್ದು ಸೂಕ್ತ ಕಾನೂನು ಕ್ರಮಕ್ಕೆ ಹಲವರು ಒತ್ತಾಯಿಸಿದ್ದಾರೆ. ಸದ್ಯ ಅಮೂಲ್ಯ ಹಾಗೂ ಆರ್ದ್ರಾ ನ್ಯಾಯಾಂಗ ಬಂಧನದಲ್ಲಿದ್ದಾರೆ.
from India & World News in Kannada | VK Polls https://ift.tt/2VdnK88