ಮಾರ್ಚ್‌ ಐದಕ್ಕೆ ರಾಜ್ಯ ಬಜೆಟ್‌: ಅಧಿಕಾರಿಗಳ ಜೊತೆಗೆ ಸಿಎಂ ಸಭೆ

ಬೆಂಗಳೂರು: ಸಂಪುಟ ವಿಸ್ತರಣೆ ಗೊಂದಲಗಳ ನಡುವೆ ಸಿಎಂ ಸೋಮವಾರ ನಡೆಸಿದರು. ಬೆಂಗಳೂರಿನ ಶಕ್ತಿಭವನದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಜತೆಗೆ ಸಿಎಂ ಸಭೆ ನಡೆಸಿದರು. ಮಾರ್ಚ್ 5 ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು ಈ ಬಾರಿ ಉತ್ತಮ ಬಜೆಟ್‌ ನೀಡುವ ನಿಟ್ಟಿನಲ್ಲಿ ಸಿಎಂ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಬಜೆಟ್‌ಗೆ ಸಂಬಂಧಿಸಿದಂತೆ ಸಿಎಂ ಅಧಿಕಾರಿಗಳ ಜೊತೆಗೆ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಸೋಮವಾರ 11.45 ಕ್ಕೆ ಸಭೆ ಆರಂಭವಾಗಿದ್ದು ಸಂಜೆ 4.45 ರ ವರೆಗೂ ನಡೆಯಲಿದೆ. ಸಭೆಯಲ್ಲಿ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವೈದ್ಯಕೀಯ ತಂತ್ರಜ್ಞಾನ, ಕೃಷಿ, ಸಾರಿಗೆ, ತೋಟಗಾರಿಕೆ, ರೇಶ್ಮೆ, ವಸತಿ, ಕಂದಾಯ, ಪೌರಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳ ಕುರಿತಾಗಿ ಸಿಎಂ ಅಧಿಕಾರಿಗಳು ಹಾಗೂ ಸಚಿವರ ಜೊತೆಗೆ ಇಲಾಖವಾರು ಮಾಹಿತಿಯನ್ನು ಪಡೆಯಲಿದ್ದಾರೆ.


from India & World News in Kannada | VK Polls https://ift.tt/2RSJ296

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...